ನವದೆಹಲಿ: ತನ್ನ ಮಾತಿನಂತೆ ಇಂದು ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 20 ಲಕ್ಷದ ಗಡಿ ದಾಟಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
20 लाख का आँकड़ा पार,
ग़ायब है मोदी सरकार। https://t.co/xR9blQledY
— Rahul Gandhi (@RahulGandhi) August 7, 2020
ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್, ದೇಶದಲ್ಲಿ ಗುರುವಾರ ಸಂಜೆ ವೇಳೆಗೆ ಕೊರೊನಾ ಪ್ರಕರಣ 20 ಲಕ್ಷ ದಾಟಿದೆ. ದೇಶದಲ್ಲಿ 13.70 ಲಕ್ಷ ಮಂದಿ ಗುಣಮುಖರಾಗುತ್ತಿದ್ದಾರೆ. ಆದರೆ ನರೇಂದ್ರ ಮೋದಿ ಸರ್ಕಾರ ನಾಪತ್ತೆಯಾಗಿದೆ ಎಂದು ಕೇಂದ್ರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಕೊರೊನಾ ಮಹಾಮಾರಿ ದೇಶದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 17ರಮದು ಟ್ವೀಟ್ ಮಾಡಿದ್ದ ಅವರು, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ದೇಶದಲ್ಲಿ ಸೋಂಕಿತರ ಪ್ರಮಾಣ ಇದೇ ರೀತಿ ಮುಂದುವರಿದರೆ ಆಗಸ್ಟ್ 10ರ ವೇಳೆಗೆ 20 ಲಕ್ಷದ ಗಡಿ ದಾಟುತ್ತದೆ ಎಂದು ಹೇಳಿದ್ದರು.
10,00,000 का आँकड़ा पार हो गया।
इसी तेज़ी से #COVID19 फैला तो 10 अगस्त तक देश में 20,00,000 से ज़्यादा संक्रमित होंगे।
सरकार को महामारी रोकने के लिए ठोस, नियोजित कदम उठाने चाहिए। https://t.co/fMxijUM28r
— Rahul Gandhi (@RahulGandhi) July 17, 2020
ಒಟ್ಟಿನಲ್ಲಿ ಕೋವಿಡ್ 19 ಎಂಬ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸರ್ಕಾರ ನಿಭಾಯಿಸುತ್ತಿರುವ ಕ್ರಮವನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಡುವ ಕೇಂದ್ರದ ಹಕ್ಕುಗಳನ್ನು ಪ್ರಶ್ನಿಸಿದ್ದಾರೆ. ಯುಎಸ್ ಮತ್ತು ಬ್ರೆಜಿಲ್ ನಂತರ ಕೋವಿಡ್ 19 ವಿಚಾರದಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಇಲ್ಲಿವರೆಗೆ 40 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.