ಬೆಂಗಳೂರು: ಮಂಗಳವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಆಸ್ಪತ್ರೆಗೆ ದಾಖಲಾದ ಬಳಿಕ ಮುಖ್ಯಮಂತ್ರಿಗಳು ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಇಂದು ಬೆಳಗ್ಗೆ ವರದಿ ನೆಗೆಟಿವ್ ಬಂದಿದೆ. ಮುಖ್ಯಮಂತ್ರಿಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಡಿಯೂರಪ್ಪನವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಿಎಂಗಾಗಿ ಹೋಮ್ ಕ್ವಾರಂಟೈನ್ ನಿಯಮ ಬದಲಾಗುತ್ತಾ?
ಕೊರೊನಾ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ. ಡಿಸ್ಚಾರ್ಜ್ ಬಳಿಕ ಸಿಎಂ ಏಳು ದಿನ ಹೋಂ ಕ್ವಾರಂಟೈನ್ ನಲ್ಲಿರಲಿದ್ದಾರೆ.