Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧೈರ್ಯ ಮಾಡಿ ಪರಿಹಾರ ಕೇಳಿ – ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧೈರ್ಯ ಮಾಡಿ ಪರಿಹಾರ ಕೇಳಿ – ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

Bengaluru City

ಧೈರ್ಯ ಮಾಡಿ ಪರಿಹಾರ ಕೇಳಿ – ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

Public TV
Last updated: August 10, 2020 1:32 pm
Public TV
Share
3 Min Read
SIDDU
SHARE

ಬೆಂಗಳೂರು: ಪ್ರವಾಹ ಪರಿಹಾರ ಕುರಿತು ರಾಜ್ಯದ ಸಚಿವರ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಸ್ವಾಗತಾರ್ಹ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಧೈರ್ಯ ಮಾಡಿ ಪರಿಹಾರ ಕೇಳಿ ಎಂದು ಹೇಳಿದ್ದಾರೆ.

ಮೊದಲಿಗೆ “ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅತಿವೃಷ್ಟಿ ಬಗ್ಗೆ @PMOIndia ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ.
ಕಳೆದ ಬಾರಿ‌ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ.
ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು.
1/10#FailedFloodMGmt

— Siddaramaiah (@siddaramaiah) August 10, 2020

ಪ್ರಧಾನಿ ಮೋದಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬೊಮ್ಮಾಯಿ, ಆರ್.ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.

.@PMOIndia ನಡೆಸುವ
ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ @BSBommai ಮತ್ತು @RAshokaBJP ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.
2/10#FailedFloodMGmt

— Siddaramaiah (@siddaramaiah) August 10, 2020

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1,00,000 ರೂ.ಕೋಟಿ ಆಗಿದೆ. ಆದರೆ ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ 50,000 ರೂ. ಕೋಟಿ. ಪರಿಹಾರ ಕೇಳಿದ್ದು 35,000 ರೂ. ಕೋಟಿ, ಆದರೆ ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ 1,860 ರೂ. ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ” ಎಂದಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ
ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ50,000 ಕೋಟಿ.

ಪರಿಹಾರ ಕೇಳಿದ್ದು
ರೂ.35,000 ಕೋಟಿ.

ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ.
ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ.
3/10#FailedFloodMGmt

— Siddaramaiah (@siddaramaiah) August 10, 2020

ಕಳೆದ ವರ್ಷ ಸಿಎಂ ಯಡಿಯೂರಪ್ಪ ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಪ್ರಧಾನಿ ಅವರ ಗಮನಕ್ಕೆ ತರಬೇಕು ಎಂದರು.

ಕಳೆದ ವರ್ಷ @CMofKarnataka ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ.

ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ.

ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು @PMOIndia ಅವರ ಗಮನಕ್ಕೆ ತರಬೇಕು.
4/10#FailedFloodMGmt

— Siddaramaiah (@siddaramaiah) August 10, 2020

ಪ್ರಧಾನಿ ಮೋದಿ ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್. ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ. ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ. ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಸರ್ಕಾರದ ವಿರುದ್ಧ ಗರಂ ಆದರು.

.@PMOIndia
ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್,
ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ @nsitharaman ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ.

ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ.
5/10#FailedFloodMGmt

— Siddaramaiah (@siddaramaiah) August 10, 2020

“15ನೇ ಹಣಕಾಸು ಆಯೋಗ ರಾಜ್ಯಕ್ಕೆ 5495 ರೂ.ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ. ಈ ಅನ್ಯಾಯವನ್ನು ಕೂಡ ರಾಜ್ಯದ ಸಚಿವರು ಇಂದಿನ ಸಭೆಯಲ್ಲಿ ಮೋದಿ ಗಮನಕ್ಕೆ ತರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ.
ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ.
6/10#FailedFloodMGmt

— Siddaramaiah (@siddaramaiah) August 10, 2020

ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

15ನೇ ಹಣಕಾಸು ಆಯೋಗ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು.

ಹಣಕಾಸು ಸಚಿವೆ @nsitharaman ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ.

ಈ ಅನ್ಯಾಯವನ್ನು ಕೂಡಾ ರಾಜ್ಯದ ಸಚಿವರು ಇಂದಿನ‌ ಸಭೆಯಲ್ಲಿ @PMOIndia ಗಮನಕ್ಕೆ ತರಬೇಕು.
7/10#InjusticeToKarnataka

— Siddaramaiah (@siddaramaiah) August 10, 2020

ಪ್ರಧಾನಿ ಮೋದಿ ಅವರ ಜೊತೆಗಿನ ರಾಜ್ಯದ ಸಚಿವರ ಸಭೆ ಕಾಟಾಚಾರದ ಕಸರತ್ತು ಆಗಬಾರದು. ಸಿಎಂ ಯಡಿಯೂರಪ್ಪ ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಬೇಕು. ನಂತರ ಆ ವರದಿಯನ್ನು ಮೋದಿ ಅವರಿಗೆ ಕಳಿಸಿಕೊಟ್ಟು, ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದರು.

ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ @PMOIndia ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು.

ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು.
8/10#FailedFloodMGmt

— Siddaramaiah (@siddaramaiah) August 10, 2020

ಈ ವರೆಗಿನ ಅನುಭವದ ಪ್ರಕಾರ, ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಪ್ರಧಾನಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಸಿಎಂ ಯಡಿಯೂರಪ್ಪ ಇಲ್ಲವೇ ಸಚಿವರಿಗಿಲ್ಲ. ಇದಕ್ಕಾಗಿ ಹೆಚ್ಚಿನ ಪರಿಹಾರ ಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಬೇಕು” ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

.@PMOIndia ಅವರ ಜೊತೆಗಿನ ರಾಜ್ಯದ ಸಚಿವರವ ಸಭೆ ಕಾಟಾಚಾರದ ಕಸರತ್ತು ಆಗಬಾರದು.
@CMofKarnataka ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ @PMOIndia ಅವರಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು.
9/10#FailedFloodMGmt

— Siddaramaiah (@siddaramaiah) August 10, 2020

TAGGED:bengalurucm yeddyurappafloodmeetingPM ModiReliefsiddaramaiahಪರಿಹಾರಪ್ರಧಾನಿ ಮೋದಿಪ್ರವಾಹಬೆಂಗಳೂರುಸಭೆಸಿಎಂ ಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
1 minute ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
14 minutes ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
33 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
45 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
1 hour ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?