– ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ದೇವೇಗೌಡರು ಮನವಿ
ಬೆಂಗಳೂರು: ಅಶಾಂತಿಯೇ ಕೆಲವರ ರಾಜಮಾರ್ಗ ಎಂದಾದರೆ, ಆ ಮಾರ್ಗವನ್ನೇ ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್‍ಡಿಕೆ
“ಶಾಂತಿಯಿಂದ ಬದುಕೋಣ ಎಂಬುದು ನಮ್ಮ ಆಶಯ. ಅಶಾಂತಿಯೇ ಕೆಲವರ ರಾಜಮಾರ್ಗ ಎಂದಾದರೆ, ಆ ಮಾರ್ಗವನ್ನೇ ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪೊಲೀಸ್ ವ್ಯವಸ್ಥೆ ಸದೃಢವಾಗಿದೆ. ನಿನ್ನೆ ರಾತ್ರಿ ಗಲಭೆ ನಡೆದ ಜಾಗದಲ್ಲಿ ಅಲ್ಲಿನ ಸ್ಥಳೀಯರು SDPI ಕಾರ್ಯವಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ದಿಶೆಯಲ್ಲೂ ಸರ್ಕಾರ ತನಿಖೆ ಮಾಡಲಿದೆ” ಎಂದು ಆರ್.ಅಶೋಕ್ ಟ್ವೀಟ್ ಮೂಲಕ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಶಾಂತಿಯಿಂದ ಬದುಕೋಣ ಎಂಬುದು ನಮ್ಮ ಆಶಯ.
ಅಶಾಂತಿಯೇ ಕೆಲವರ ರಾಜಮಾರ್ಗ ಎಂದಾದರೆ, ಆ ಮಾರ್ಗವನ್ನೇ ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪೊಲೀಸ್ ವ್ಯವಸ್ಥೆ ಸದೃಡವಾಗಿದೆ.
ನಿನ್ನೆ ರಾತ್ರಿ ಗಲಭೆ ನಡೆದ ಜಾಗದಲ್ಲಿ ಅಲ್ಲಿನ ಸ್ಥಳೀಯರು SDPI ಕಾರ್ಯವಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ದಿಶೆಯಲ್ಲೂ ಸರ್ಕಾರ ತನಿಖೆ ಮಾಡಲಿದೆ. pic.twitter.com/CkGiju7xKC
— R. Ashoka (ಆರ್. ಅಶೋಕ) (@RAshokaBJP) August 12, 2020
ಅಲ್ಲದೇ ಎಸ್‍ಡಿಪಿಐ ಸಂಘಟನೆಯ ಪಾತ್ರದ ಬಗ್ಗೆ ತನಿಖೆ ಮಾಡೋದಾಗಿ ಅಶೋಕ್ ಮಾಹಿತಿ ನೀಡಿದ್ದಾರೆ. ಇನ್ನೂ ಡಿಜೆ ಹಳ್ಳಿ ಘಟನೆಗೆ ಮಾಜಿ ಪ್ರಧಾನಿ ದೇವೇಗೌಡ ಕೂಡ ಖಂಡನೆ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ,ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು,ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ.
— H D Devegowda (@H_D_Devegowda) August 12, 2020
“ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ, ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು, ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ” ದೇವೇಗೌಡರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.