ದೇಶ ಸೇವೆಯ ಗುರಿ ಹೊಂದಿರೋ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸ್ತಾರೆ: ನಳಿನ್

Public TV
1 Min Read
ANNAMALAI NALIN

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಇದೀಗ ಅವರಿಗೆ ಶುಭಾಶಯಗಳ ಸುರಿಮಳೆಗಳೇ ಹರಿದುಬರುತ್ತಿವೆ.

Annamalai 2

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯವಾದಿಗಳು, ಅಪ್ಪಟ ದೇಶ ಭಕ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ. ದೇಶ ಸೇವೆಯ ಗುರಿ ಹೊಂದಿರುವ ಪ್ರತಿ ದೇಶವಾಸಿಯೂ ಬಿಜೆಪಿಯನ್ನೇ ಬೆಂಬಲಿಸುತ್ತಾರೆ. ಅಣ್ಣಾಮಲೈ ಅವರನ್ನು ತುಂಬು ಹೃದಯದಿಂದ ನಮ್ಮ ಬಿಜೆಪಿ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಿಷ್ಠೆಯಿಂದ ಯೋಧನಾಗಿ ಬಿಜೆಪಿಗೆ ದುಡಿಯುತ್ತೇನೆ- ಅಣ್ಣಾಮಲೈ

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು, ಮಾದರಿ ಕಾರ್ಯದಕ್ಷತೆಗೆ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರಲೆಂದೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ರಾ – ಹಲವು ಪ್ರಶ್ನೆಗಳಿಗೆ ಅಣ್ಣಾಮಲೈ ಉತ್ತರ

ವೈದ್ಯಕೀಯ ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿ, ಕರ್ನಾಟಕ ಸಿಂಗಂ ಖ್ಯಾತಿಯ ನಿವೃತ್ತ ಪೊಲೀಸ್ ಅಧಿಕಾರಿ ಶ್ರೀ ಕುಪುಸ್ವಾಮಿ ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ರಾಷ್ಟ್ರೀಯವಾದಿ ಮನಃಸ್ಥಿತಿಯ ಶ್ರೀ ಕೆ.ಅಣ್ಣಾಮಲೈ ಅವರು ತಮಿಳುನಾಡಿಗೆ ಹೊಸ ದೃಷ್ಟಿ, ದಿಕ್ಕು ನೀಡಲಿದ್ದಾರೆ. ಸಿಂಗಂಗೆ ಸ್ವಾಗತ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಪಕ್ಷದ ಸದಸ್ಯತ್ವ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ಅಣ್ಣಾಮಲೈ ಅವರು, ನಾನು ಸಾಮಾನ್ಯ ಕಾರ್ಯಕರ್ತನಂತೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನನಗಿಂತ ಮುನ್ನ ಸಾವಿರಾರು ಕಾರ್ಯಕರ್ತರು ಪಕ್ಷಕ್ಕಾಗಿ ಕೆಲಸ ಮಾಡಿದ್ದು, ನಾನು ಪಕ್ಷದಲ್ಲಿ ಏನನ್ನು ನಿರೀಕ್ಷೆ ಮಾಡದೆ ಸೇರ್ಪಡೆಯಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *