ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಸಿಎಂ ಆದ್ರಿ: ಸುಧಾಕರ್

Public TV
3 Min Read
HDK SUDHAKAR

– ರಾಜೀನಾಮೆ ನೀಡುವ ಸವಾಲು

– ಪುರಾವೆ ಒದಗಿಸಲು ಸಚಿವ  ಸುಧಾಕರ್ ಆಗ್ರಹ

ಬೆಂಗಳೂರು: ಡ್ರಗ್ ಮಾಫಿಯಾ ಹಣ ನಮ್ಮ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ಆದರೆ ನೀವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲೆಸೆದಿದ್ದಾರೆ.

CKB SUDHAKAR medium

ಡ್ರಗ್ ಮಾಫಿಯಾದಿಂದ ತಮ್ಮ ಸರ್ಕಾರ ಬುಡಮೇಲಾಯಿತು ಎಂಬ ಎಚ್‍ಡಿಕೆ ಅವರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ನಾನು ಯಾವ ಮುಂಬೈಗೂ ಹೋಗಿಲ್ಲ. ಮಾಜಿ ಮುಖ್ಯಮಂತ್ರಿಗಳಾಗಿ ಇಂತಹ ಗಂಭೀರ ಆರೋಪ ಮಾಡಬಾರದು. ಆರೋಪ ಮಾಡಿದರೆ ಅದಕ್ಕೆ ಪುರಾವೆಯನ್ನೂ ನೀಡಬೇಕು. ಬಿಜೆಪಿ ಅಂತಹ ಅನೈತಿಕ ಕೆಲಸವನ್ನೂ ಎಂದೂ ಮಾಡಿಲ್ಲ. ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ. ತಾವು ತಲೆ ಕೆಡಿಸಿಕೊಳ್ಳುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.

ಮಾಜಿ ಸಿಎಂ ಎಚ್‍ಡಿಕೆ ಅವರಿಗೆ ಟ್ವೀಟ್ ಮೂಲಕವೇ ಸಚಿವರು ನೀಡಿರುವ ಸುಧಾಕರ್, ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂದು ಮರುಪ್ರಶ್ನಿಸಿದ್ದಾರೆ. ಅಲ್ಲದೇ ನಾನು ಕೇಳಿದ್ದು ಡ್ರಗ್ ಮಾಫಿಯಾ ಆರೋಪದ ಹಿನ್ನಲೆಗಳ ಬಗ್ಗೆ, ಮಾಜಿ ಮುಖ್ಯಮಂತ್ರಿಗಳಾಗಿ, ಡ್ರಗ್ ಮಾಫಿಯಾ ಹಣದಿಂದ ಸರ್ಕಾರ ಬಂದಿದೆ ಎಂದು ಚುನಾಯಿತ ಸರ್ಕಾರದ ಮೇಲಿನ ಬೇಜಾವಾಬ್ದಾರಿ ಹೇಳಿಕೆಯ ಹಿನ್ನಲೆ ಬಗ್ಗೆ! ಬಿಜೆಪಿ ಅನೈತಿಕ ಕೆಲಸವನ್ನು ಎಂದೂ ಮಾಡಿಲ್ಲ, ಮಾಡುವುದಿಲ್ಲ. ಅದಕ್ಕೆ 2 ಸ್ಥಾನದಿಂದ 303 ಸ್ಥಾನಗಳನ್ನು ಜನ ಆಶೀರ್ವದಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ, ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ? ನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡ್ತೇನಿ ಆಗದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದಿದ್ದಾರೆ.

ತಮ್ಮ ಆರೋಪಗಳ ಹಿನ್ನಲೆ ಆಧಾರಗಳ ಬಗ್ಗೆ ಕೇಳಿದ್ದೇನೆ. ನಾನು ಮಾಜಿ ಮುಖ್ಯಮಂತ್ರಿ ಮಾಜಿ ಪ್ರಧಾನಮಂತ್ರಿಯ ಮಗನಲ್ಲ, ಒಬ್ಬ ಸಾಮಾನ್ಯ ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮಥ್ರ್ಯದಿಂದ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ. ಎಲ್ಲರ ಹಿನ್ನಲೆಗಳನ್ನೂ ರಾಜ್ಯದ ಜನರು ಗ್ರಹಿಸಿದ್ದಾರೆ.

ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? ಪಕ್ಕದಲ್ಲಿ ಧರಮ್ ಸಿಂಗ್ ಅವರನ್ನು ಇಟ್ಟುಕೊಂಡು, ಕೆಲವು ಸ್ನೇಹಿತರೊಂದಿಗೆ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ಹಿನ್ನಲೆ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಒಮ್ಮೆ ಕೇಳಿಸಿಕೊಳ್ಳಿ! ಸರ್ಕಾರದ ವಿರುದ್ಧ ತಮ್ಮ ಆರೋಪಗಳಿಗೆ ಪುರಾವೆ ನೀಡಿ. ಸರ್ಕಾರದಲ್ಲಿ ಸಚಿವನಾಗಿ ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡಿದರೆ ಅದಕ್ಕೆ ಪುರಾವೆ ಕೇಳುವುದು ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಹೇಗಾದೀತು? ಎಂದಿದ್ದಾರೆ.

ವಚನದ ಮೂಲಕವೇ ಟಾಂಗ್ ನೀಡಿರುವ ಸುಧಾಕರ್ ಅವರು, ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ. ತನಗಾದ ಆಗೇನು ಅವರಿಗಾದ ಚೇಗೆಯೇನು. ತನುವಿನ ಕೋಪ ತನ್ನ ಹಿರಿಯತನದ ಕೇಡು. ಮನದ ಕೋಪ ತನ್ನರಿವಿನ ಕೇಡು. ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೇ. ನೆರೆಮನೆಯ ಸುಡದೋ ಕೂಡಲಸಂಗಮದೇವ ಎಂದು ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *