ನಿಯಂತ್ರಣ ತಪ್ಪಿ ಬಸ್ ನಿಲ್ದಾಣದೊಳಗೆ ನುಗ್ಗಿದ ಖಾಸಗಿ ಬಸ್ – ಓರ್ವ ಸಾವು

Public TV
1 Min Read
Bengaluru Eighth Mile

– ಪಾನಮತ್ತ ಚಾಲಕ ಅರೆಸ್ಟ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.

ಇಂದು ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ.

Bengaluru Eighth Mile 3

ಬಸ್ ಚಾಲಕ ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಕಾರಣ ಈ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದೆ. ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಪ್ರಕ್ರಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಬಸ್ಸುನ್ನು ತೆರವುಗೊಳಿಸುವ ಕೆಲಸವನ್ನು ಮಾಡಿದ್ದಾರೆ.

Bengaluru Eighth Mile 2

Share This Article
Leave a Comment

Leave a Reply

Your email address will not be published. Required fields are marked *