ನವದೆಹಲಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಚರ್ಚೆ ವೇಳೆ ಗದ್ದಲ ಮಾಡಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆ ವಿಪಕ್ಷದ ಎಂಟು ಮಂದಿ ಸಂಸದರನ್ನು ಒಂದು ವಾರಗಳ ಕಲಾಪದಿಂದ ಅಮಾನತು ಮಾಡಲಾಗಿದೆ.
ಇಂದು ಕಲಾಪ ಆರಂಭವಾಗುತ್ತಿದ್ದಂತೆ ನಿನ್ನೆ ಘಟನೆಯ ಬಗ್ಗೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಆಕ್ರೋಶ ವ್ಯಕ್ತಪಡಿಸಿದರು. ಉಪಾಧ್ಯಕ್ಷರ ಕರ್ತವ್ಯ ನಿಭಾಯಿಸಲು ಅಡ್ಡಿ ಪಡಿಸಿದ ಆರೋಪದ ಮೇಲೆ ಡೆರೆಕ್ ಒ’ಬ್ರಿಯೆನ್ ಸೇರಿ ಎಂಟು ಮಂದಿ ಸಂಸದರು ಅಮಾನತು ಮಾಡಲಾಯಿತು.
ನಿನ್ನೆ ಚರ್ಚೆ ವೇಳೆ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಸದನದ ಬಾವಿಗಿಳಿದು ಬಿಲ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡೆರೆಕ್ ಒ’ಬ್ರಿಯೆನ್ ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸಂಸದರ ಸೈಯದ್ ನಾಸೀರ್ ಹುಸೇನ್, ಸಂಜಯ್ ಸಿಂಗ್, ರಾಜು ಸತವ್, ಕೆ.ಕೆ ರಾಗೇಶ್, ರಿಪುನ್ ಬೋರಾ, ಡೋಲಾ ಸೇನ್ ಮತ್ತು ಎಲಮರನ್ ಕರೀಮ್ ಮಸೂದೆ ವಿರೋಧಿಸಿ ಸದನದ ಬಾವಿಗಿಳಿದಿದ್ದರು. ಇದನ್ನೂ ಓದಿ: ವಿರೋಧದ ನಡುವೆ 2 ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಪಾಸ್
ಸಂಸದರ ಅಮಾನತು ನಿರ್ಧಾರ ಪ್ರಕಟಿಸುವ ಮುನ್ನ ಮಾತನಾಡಿದ ಸಭಾಧ್ಯಕ್ಷ ವೆಂಕಯ್ಯನಾಯ್ಡು ನಿನ್ನೆ ಬೆಳವಣಿಗೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಗೆ ನಿನ್ನೆ ಕೆಟ್ಟ ದಿನ, ಉಪ ಸಭಾಧ್ಯಕ್ಷರಿಗೆ ಸದಸ್ಯರು ದೈಹಿಕ ಬೆದರಿಕೆ ಹಾಕಿದ್ದಾರೆ. ಕರ್ತವ್ಯ ನಿಭಾಯಿಸಲು ಅಡ್ಡಿಪಡಿಸಿದ್ದಾರೆ ಇದೊಂದು ದುರಾದೃಷ್ಟವಕರ ಬೆಳವಣಿಗೆ ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೇಂದ್ರದ ಕೃಷಿ ಮಸೂದೆಯಲ್ಲಿ ರೈತರ ಶೋಷಣೆಯೇ ಹೆಚ್ಚು – ರಾಜ್ಯಸಭೆಯಲ್ಲಿ ಹೆಚ್‍ಡಿಡಿ ವಿರೋಧ
Derek O Brien, Sanjay Singh, Raju Satav, KK Ragesh, Ripun Bora, Dola Sen, Syed Nazir Hussain and Elamaran Karim suspended for one week for unruly behaviour with the Chair: Rajya Sabha Chairman M Venkaiah Naidu pic.twitter.com/JUs9pjOXNu
— ANI (@ANI) September 21, 2020