ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿಗೆ ಬಲಿಯಾದ್ರೆ ಸರ್ಕಾರ 50 ಲಕ್ಷ ಪರಿಹಾರ ನೀಡ್ಬೇಕು: ಎಚ್‍ಡಿಕೆ

Public TV
1 Min Read
hdk

ಬೆಂಗಳೂರು: ಕೊರೊನಾ ಸಂಕಷ್ಟದ ದಿನಗಳಲ್ಲಿ ಜನರ ಆರೋಗ್ಯದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ಪೌರಕಾರ್ಮಿಕರು ದುಡಿಯುತ್ತಿದ್ದಾರೆ. ಅವರು ಕೂಡ ವೈದ್ಯ ಸಮೂಹದಷ್ಟೆ ಪ್ರಧಾನ ಪಾತ್ರ ವಹಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪೌರಕಾರ್ಮಿಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಪೌರಕಾರ್ಮಿಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ. ಜೊತೆಗೆ ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ ಅವರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ” ಎಂದು ಹೇಳಿದ್ದಾರೆ.

ಪೌರಕಾರ್ಮಿಕ ದಿನಾಚರಣೆಯ ಶುಭಾಶಯಗಳು. ಕೊರೊನಾ ಸಂಕಷ್ಟದ ಈ ದಿನಗಳಲ್ಲಿ ಜನರ ಆರೋಗ್ಯದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರು ವೈದ್ಯ ಸಮೂಹದಷ್ಟೆ ಪ್ರಧಾನ ಪಾತ್ರ ವಹಿಸಿದ್ದಾರೆ ಎಂದರು.

“ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು. ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗುತ್ತದೆ” ಎಂದು ಕುಮಾರಸ್ವಾಮಿ ಪೌರಕಾರ್ಮಿಕರಿಗೂ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

Share This Article
Leave a Comment

Leave a Reply

Your email address will not be published. Required fields are marked *