– ಗಂಡು ಶಿಶುವಿಗೆ ಇಲಾಖೆ ಆಸರೆ
ಯಾದಗಿರಿ: ಒಂಬತ್ತು ತಿಂಗಳು ಹೊತ್ತು, ಬಳಿಕ ಹೆತ್ತು ಅದೇ ಮಗುವನ್ನು ಬೀದಿಯಲ್ಲಿ ಪಾಪಿ ತಾಯಿಯೊಬ್ಬಳು ಬಿಟ್ಟು ಹೋದ ಮನಕಲಕುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಜಿಲ್ಲೆಯ ಮುಂಡರಗಿ ಹೊರವಲಯದಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿದ್ದು, ರಸ್ತೆ ಬದಿಯಲ್ಲಿ ಬಿದ್ದಿದ ಮಗುವನ್ನು ಕುಟುಂಬ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಲಾಗಿದೆ. ಮಗು 2.5 ಕೆಜಿ ಇದ್ದು ಆರೋಗ್ಯವಾಗಿದೆ. ಜಿಲ್ಲಾಸ್ಪತ್ರೆಯ ಶಿಶು ತುರ್ತು ನಿಗಾ ಘಟಕದಲ್ಲಿ ಮಗುವಿಗೆ ಆರೈಕೆ ಮಾಡಲಾಗುತ್ತಿದೆ. ಮಗುವಿಗೆ ಕುಟುಂಬ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಭಾಕರ್ ಮತ್ತು ಸಿಡಿಪಿಯ ಆಸರೆ ದೊರೆತಿದೆ.
ಯಾದಗಿರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪಾಲಕರಿಗಾಗಿ ತೀವ್ರ ಹುಡುಕಾಟ ನಡೆದಿದೆ.