ಹೈದರಾಬಾದ್: ಸಿನಿಮಾ ಲೋಕದ ಮಿಲ್ಕಿ ಬ್ಯುಟಿ ತಮನ್ನಾ ಭಾಟಿಯಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೈದರಾಬಾದ್ ನಲ್ಲಿ ನಡೆಯುತ್ತಿರುವ ಚಿತ್ರೀಕರಣ ವೇಳೆ ತಮನ್ನಾರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾದಾಗ ವರದಿಯಲ್ಲಿ ಸೋಂಕು ತಗುಲಿರೋದು ಖಚಿತವಾಗಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೂ ಮೊದಲು ತಮನ್ನಾ ಪೋಷಕರಿಗೂ ಕೊರೊನಾ ಸೋಂಕು ತಗುಲಿದೆ.
ಕೆಲ ದಿನಗಳ ಹಿಂದೆ ಬಾಲಿವುಡ್ ಮಲೈಕಾ ಅರೋರಾ ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದರಿಂದ ಮನೆಯಲ್ಲಿಯೇ ಐಸೋಲೇಶನ್ ಗೆ ಒಳಗಾಗಿದ್ದರು. ಇನ್ನು ಐಶ್ವರ್ಯಾ ರೈ, ಪುತ್ರಿ ಆರಾಧ್ಯ, ಪತಿ ಅಭಿಷೇಕ್ ಬಚ್ಚನ್ ಮತ್ತು ಹಿರಿಯ ನಟಿ ಅಮಿತಾಬ್ ಬಚ್ಚನ್ ಸಹ ಕೊರೊನಾ ವಿರುದ್ಧ ಹೋರಾಡಿ ಗೆದ್ದಿದ್ದಾರೆ.