– ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಿದ್ದ ಯುವತಿ
ಹೈದರಾಬಾದ್: ಪ್ರೀತಿಸಿ ಮದುವೆಯಾಗಿದ್ದ ಯುವತಿ ಮದುವೆಯಾದ 6 ತಿಂಗಳಿಗೆ ಆತ್ಮಹತ್ಯೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ಯಾದಾದ್ರಿ ಜಿಲ್ಲೆಯಲ್ಲಿ ನಡೆದಿದೆ.
22 ವರ್ಷದ ನವಿತಾ ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದು, ಯಾದಾದ್ರಿ ಜಿಲ್ಲೆಯ ಮೊತ್ಕೂರ್ ಮಂಡಲದ ದಾತಪ್ಪಗೂಡೆಂ ಗ್ರಾಮದ ನಿವಾಸಿಯಾಗಿದ್ದಳು. ಕಳೆದ ಆರು ತಿಂಗಳ ಹಿಂದೆ ಅದೇ ಗ್ರಾಮದ ಯುವಕನ್ನು ಪ್ರೀತಿಸಿ ಆರ್ಯ ಸಮಾಜದಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಳು.
ಮದುವೆ ಬಳಿಕ ಗಂಡನ ಮನೆಗ ಬಂದ ನವಿತಾಗೆ ವರದಕ್ಷಿಣೆ ಕಿರುಕುಳ ನೀಡಲಾಗಿತ್ತು ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕಿರುಕುಳದಿಂದ ಬೇಸತ್ತ ನವಿತಾ ಇದೇ ಅಕ್ಟೋಬರ್ 2ರಂದು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‍ಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವಿತಾ ಗುರುವಾರ ಸಾವನ್ನಪ್ಪಿದ್ದಳು. ಮಗಳನ್ನು ಕಳೆದುಕೊಂಡ ಕುಟುಂಬಸ್ಥರು ನವಿತಾ ಪತಿಯ ಕುಟುಂಬಸ್ಥರ ಮೇಲೆ ಆರೋಪ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.