21 ವರ್ಷಗಳ ನಂತ್ರ ಪುನೀತ್ ಜೊತೆ ನಟನೆ- ರೋಮಾಂಚನಗೊಂಡಿದ್ದೇನೆ ಅಂದ್ರು ಅನು

Public TV
2 Min Read
APPU ANU

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಈ ಚಿತ್ರದಲ್ಲಿ ನಟಿ ಅನುಪ್ರಭಾಕರ್ ಕೂಡ ನಟಿಸಲಿದ್ದಾರೆ.

anuprabhakar movie

ಈ ಸಂಬಂಧ ಟ್ವೀಟ್ ಮಾಡಿರುವ ಅನು, ನನ್ನ ಪಾಲಿನ ದೇವರುಗಳಾದ ನಿಮ್ಮ ತಂದೆ-ತಾಯಿ, ನನ್ನನ್ನು ಕನ್ನಡಿಗರಿಗೆ, ನಿಮ್ಮ ಅಣ್ಣ ಶಿವರಾಜ್ ಕುಮಾರ್ ಅವರ ಜೋಡಿಯಾಗಿ ಪರಿಚಯಿಸಿದರು. 21 ವರ್ಷಗಳ ನಂತರ ಈಗ ನಿಮ್ಮ ಜೊತೆ ಅಭಿನಯಿಸುವ ಅವಕಾಶ ದೊರೆತಿದೆ ಎಂದು ಬರೆದುಕೊಂಡು ಪುನೀತ್ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೆ ನಾನು ರೋಮಾಂಚನಗೊಂಡಿದ್ದು, ಎದುರು ನೋಡುತ್ತಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Capture 10

ಚಿತ್ರದಲ್ಲಿ ಅನುಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. 55ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನು ಪ್ರಭಾಕರ್ ಇದೀಗ ಮೊದಲ ಬಾರಿಗೆ ಪುನೀತ್ ರಾಜ್‍ಕುಮಾರ್ ಜೊತೆ ಬಣ್ಣ ಹಚ್ಚುತ್ತಿದ್ದಾರೆ. ಅನು ಪ್ರಭಾಕರ್ ಚಿತ್ರ ತಂಡ ಸೇರಿರುವುದು ಅಭಿಮಾನಿಗಳಲ್ಲಿ ಇನ್ನೂ ಕುತೂಹಲ ಹೆಚ್ಚಿಸಿದ್ದು, ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

Anuprabhakar

ಯುವರತ್ನ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಮೊನ್ನೆಯಷ್ಟೇ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅಪ್ಪು ಜೇಮ್ಸ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಲಾಕ್‍ಡೌನ್ ವೇಳೆ ಫುಲ್ ರೆಸ್ಟ್ ಮೂಡ್‍ನಲ್ಲಿದ್ದ ಅಪ್ಪು ಇದೀಗ ಸಖತ್ ಬ್ಯುಸಿಯಾಗಿದ್ದಾರೆ. ಯುವರತ್ನ ಚಿತ್ರೀಕರಣ ಪೂರ್ಣಗೊಳಿಸಿ ಸದ್ಯ ಜೇಮ್ಸ್ ಶೂಟಿಂಗ್ ಶುರು ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಜೇಮ್ಸ್ ಸಿನಿಮಾ ಸದ್ದು ಮಾಡುತ್ತಿದ್ದು, ಇದೀಗ ಚಿತ್ರೀಕರಣ ಆರಂಭವಾಗಿದೆ. ಭರ್ಜರಿ ಚೇತನ್ ಕುಮಾರ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿನಿಮಾ ಯಾವ ರೀತಿ ಮೂಡಿ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

puneeth rajkumar priya anand

ಚಿತ್ರೀಕರಣ ಆರಂಭವಾಗುತ್ತಿದ್ದಂತೆ ಚಿತ್ರದ ಕುರಿತು ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ತಾರಾಗಣದ ಬಗ್ಗೆ ಸಹ ಪ್ರಶ್ನಿಸುತ್ತಿದ್ದಾರೆ. ಪ್ರಮುಖವಾಗಿ ಪುನೀತ್ ಜೊತೆ ಯಾರು ರೊಮಾನ್ಸ್ ಮಾಡಲಿದ್ದಾರೆ, ನಾಯಕಿ ಯಾರಾಗಬಹುದು ಎಂಬ ಚರ್ಚೆ ನಡೆಯುತ್ತಿತ್ತು. ಇದಕ್ಕೆ ಇದೀಗ ತೆರೆ ಬಿದ್ದಿದ್ದು, ಹಿರೋಯಿನ್ ಹೆಸರು ಬಹಿರಂಗವಾಗಿದೆ. ಜೇಮ್ಸ್ ಚಿತ್ರದಲ್ಲಿ ಅಪ್ಪು ಜೊತೆ ತಮಿಳು ನಟಿ ಪ್ರಿಯಾ ಆನಂದ್ ರೊಮ್ಯಾನ್ಸ್ ಮಾಡಲಿದ್ದಾರೆ.

puneeth rajkumar priya anand main

Share This Article
Leave a Comment

Leave a Reply

Your email address will not be published. Required fields are marked *