Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

Bengaluru City

ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

Public TV
Last updated: October 16, 2020 2:32 pm
Public TV
Share
3 Min Read
cm bs yadiyurappa
SHARE

ಬೆಂಗಳೂರು: ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸಬೇಕು. ನೆರೆ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ರಾಜ್ಯದ ಪ್ರವಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ರಾಜ್ಯದ ಕೆಲವಡೆ ಹೆಚ್ಚಿನ ಮಳೆಯಾಗುತ್ತಿದ್ದು, ಈಗಾಗಲೇ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ಅಪಾಯದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಂಡಿರುತ್ತಾರೆ. ಕೇಂದ್ರ ಸರ್ಕಾರದ ವತಿಯಿಂದ ಕಲಬುರಗಿಯಲ್ಲಿ-2, ಯಾದಗಿರಿಯಲ್ಲಿ-2 ಮತ್ತು ರಾಯಚೂರಿನಲ್ಲಿ-1 NDRF ತಂಡಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. (1/2) pic.twitter.com/trpyCcDoW8

— CM of Karnataka (@CMofKarnataka) October 15, 2020

ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒಗಳೊಂದಿಗೆ ಮುಖ್ಯಮಂತ್ರಿ @BSYBJP ರವರು ಇಂದು ವೀಡಿಯೋ ಸಂವಾದ ನಡೆಸಿದರು. (1/2) pic.twitter.com/RjamSgooIv

— CM of Karnataka (@CMofKarnataka) October 16, 2020

ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ವಾಸ್ತವ ಸ್ಥಿತಿಯ ಚಿತ್ರಣ ನೀಡಿ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅಕ್ಟೋಬರ್ 10 ರಿಂದ 15 ರವರೆಗೆ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಿಂದ ಭೀಮಾ ಮತ್ತು ಇದರ ಉಪನದಿಗಳಲ್ಲಿ ದಾಖಲೆ ಪ್ರಮಾಣದ ಒಳಹರಿವು ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

vlcsnap 2020 10 16 08h28m21s96

ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಿ. ಸಂತ್ರಸ್ತರಿಗೆ ಉತ್ತಮ ಆಹಾರ ಪೂರೈಕೆಯಾಗಬೇಕು, ಕೋವಿಡ್ ಪರಿಸ್ಥಿತಿ ಹಿನ್ನೆಲೆ ಕಾಳಜಿ ಕೇಂದ್ರಗಳಲ್ಲಿ ಎಸ್.ಒ.ಪಿ ಪಾಲನೆ ಮಾಡಿ. ಈ ಬಗ್ಗೆ ಯಾವುದೇ ದೂರುಗಳು ಬರಬಾರದು. ಜಾನುವಾರುಗಳಿಗೂ ರಕ್ಷಣೆ ನೀಡಿ, ಮೇವು ಪೂರೈಕೆಯಾಗಬೇಕು ಎಂದು ತಿಳಿಸಿದರು.

GLB 3

ಕೋವಿಡ್-19 ಹಿನ್ನೆಲೆ ಕಾಳಜಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಗಳ ಪೂರೈಕೆ ಸೇರಿದಂತೆ ವೈದ್ಯರು ಭೇಟಿ ನೀಡಿ ತಪಾಸಣೆ ಮಾಡುವಂತೆ ವ್ಯವಸ್ಥೆ ಕೈಗೊಳ್ಳಲು ಹಾಗೂ ಕೋವಿಡ್ ಲಕ್ಷಣಗಳಿರುವವರು ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ತಕ್ಷಣ ಸ್ಥಳಾಂತರಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ನೆರೆ ಸಂತ್ರಸ್ತರ ರಕ್ಷಣೆಗಾಗಿ ಪುಣೆ ಮತ್ತು ಚನ್ನೈ ನಿಂದ ಎನ್‍ಡಿಆರ್‍ಎಫ್ ನ ಆರು ಹೆಚ್ಚುವರಿ ತಂಡಗಳು ಸೇರಿದಂತೆ ಒಟ್ಟು 12 ಎನ್‍ಡಿಆರ್‍ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಕಲಬುರಗಿಗೆ ಮೂರು, ಯಾದಗಿರಿಗೆ ಎರಡು ಹಾಗೂ ರಾಯಚೂರಿಗೆ ಒಂದು ತಂಡವನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.

ಹೆಚ್ಚುವರಿಯಾಗಿ ಇನ್ನೂ ಒಂದೊಂದು ತಂಡವನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿದ್ದು, 2 ಹೆಲಿಕ್ಯಾಪ್ಟರ್‌ಗಳನ್ನು ಸಹ ಬೀದರ್ ಗೆ ಕಳುಹಿಸಲಾಗುತ್ತಿದೆ. ನಾಳೆ ಪ್ರವಾಹ ಪೀಡಿತ ಜಿಲ್ಲೆಗಳ ಮುಖ್ಯಸ್ಥರೊಂದಿಗೆ ವೀಡಿಯೊ ಕಾನ್ಫರೆನ್ಸ್ ಮುಖಾಂತರ ಸಭೆ ನಡೆಸಲಾಗುವುದು. (2/2)

— CM of Karnataka (@CMofKarnataka) October 15, 2020

ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳಿಂದ 14 ದೋಣಿಗಳನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ರಕ್ಷಣಾ ಹೆಲಿಕಾಪ್ಟರ್‍ಗಳನ್ನು ಕಳುಹಿಸಲಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿ. ಜನರ ನೋವಿಗೆ ತಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

GLB 1 1

ಇದೇ ಸಂದರ್ಭದಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ 51,810 ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ 36.57 ಕೋಟಿ ರೂ.ಗಳ ಇನ್‍ಪುಟ್ ಸಬ್ಸಿಡಿಯನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆನ್‍ಲೈನ್ ಮೂಲಕ ಜಮೆ ಮಾಡಿದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:bengaluruChief Minister BS Yediyurappafloodnorth karnatakaPublic TVಉತ್ತರ ಕರ್ನಾಟಕಪಬ್ಲಿಕ್ ಟಿವಿಪ್ರವಾಹಬೆಂಗಳೂರುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

rahul gandhi kiren rijiju
Latest

ರಾಹುಲ್ ಗಾಂಧಿ ಭಾಷಣದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಬಿಜೆಪಿ ನಿರ್ಧಾರ

Public TV
By Public TV
16 minutes ago
BD Bhukanth
Bengaluru City

ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ

Public TV
By Public TV
27 minutes ago
Magadi Balakrishna
Bengaluru City

ಫಾರಿನ್ ಟೂರ್‌ಗೆ ನಾವು ಹೋಗಲ್ಲ, ಹಾಲು ಎಷ್ಟು ಕರೆಯುತ್ತೆ ಅನ್ನೋದನ್ನ ನೋಡಲು ಹೋಗ್ತಿದ್ದಾರೆ: ಮಾಗಡಿ ಬಾಲಕೃಷ್ಣ

Public TV
By Public TV
1 hour ago
Congress MLA
Bengaluru City

ನಿಜವಾಯ್ತು `ಪಬ್ಲಿಕ್ ಟಿವಿ’ ವರದಿ, `ಕೈ’ ಶಾಸಕರ ಫಾರಿನ್ ಟೂರ್ ಫಿಕ್ಸ್ – ಉಲ್ಟಾ ಹೊಡೆದ ಪುಟ್ಟರಂಗಶೆಟ್ಟಿ

Public TV
By Public TV
1 hour ago
rahul gandhi
Latest

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

Public TV
By Public TV
1 hour ago
kids died accident
Bengaluru City

ಸ್ಕೂಟರ್ ಮೇಲೆ ಹರಿದ ಶಾಲಾ ಬಸ್ – ಇಬ್ಬರು ಪುಟ್ಟ ಕಂದಮ್ಮಗಳು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?