– ಅಧಿಕಾರಿಗಳ ಕುಮ್ಮಕ್ಕಿಗೆ ರೈತರ ಆಕ್ರೋಶ
ಕೋಲಾರ: ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಮಾಲೂರು ಕೃಷಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರೈತರಿಗೆ ಸರಬರಾಜು ಮಾಡಬೇಕಿದ್ದ ಯೂರಿಯಾ ಗೊಬ್ಬರವನ್ನು ಖಾಸಗಿ ಕಾರ್ಖಾನೆ ಗೋಡೌನ್‍ನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು 420 ಮೂಟೆ ಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಾಲೂರು ಸಹಾಯಕ ಕೃಷಿ ಅಧಿಕಾರಿ ಚಂದ್ರಪ್ಪ ಅವರ ತಂಡ ದಾಳಿ ನಡೆಸಿದ್ದು, ಮಾಲೂರು ತಾಲೂಕು ಕೊಡಗಿನಬೆಲೆ ಗ್ರಾಮದಲ್ಲಿರುವ ಮಕ್ರ್ಯುರಿ ಪಾಲಿಮರ್ ಕಂಪನಿಯಲ್ಲಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ವಶಕ್ಕೆ ಪಡೆಯಲಾಗಿದೆ.
ಇದೇ ರೀತಿ ಶ್ರೀನಿವಾಸಪುರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಯೂರಿಯವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಅಧಿಕಾರಿಗಳ ಕುಮ್ಮುಕ್ಕಿನಿಂದಲೆ ಅಕ್ರಮ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ರಸಗೊಬ್ಬರ ಅಂಗಡಿ ಪರಿಶೀಲನೆ ಮಾಡಬೇಕು. ಹೆಚ್ಚಿನ ನಿಗಾ ವಹಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.