ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕೆ ಇಳಿಕೆ- 24 ಗಂಟೆಯಲ್ಲಿ 62 ಸಾವಿರ ಜನರಿಗೆ ಸೋಂಕು

Public TV
3 Min Read
CORONA VIRUS 10

– ಒಟ್ಟು ಪ್ರಕರಣಗಳ ಪೈಕಿ ಶೇ.10.70ರಷ್ಟು ಮಾತ್ರ ಆ್ಯಕ್ಟಿವ್ ಕೇಸ್

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹಾಗೂ ಸೋಂಕಿನಿಂದ ಸಾವನ್ನುತ್ತಿರುವವರ ಸಂಖ್ಯೆ ಇಳಿಕೆಯಾಗುತ್ತಿದ್ದು, ಒಟ್ಟು ಸೋಂಕಿತರ ಪೈಕಿ ಕೇವಲ ಶೇ.10.70ರಷ್ಟು ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ ಒಂದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತ ಪ್ರಕರಣಗಳಲ್ಲಿ ಕೇವಲ ಶೇ.10.70ರಷ್ಟು ಸಕ್ರಿಯವಾಗಿವೆ. ಗುಣಮುಖರಾಗುತ್ತಿರುವವರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕಳೆದ 24 ಗಂಟೆಗಳಲ್ಲಿ 62,212 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 837 ಜನ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 74,32,681ಕ್ಕೆ ಹೆಚ್ಚಳವಾಗಿದೆ. ಇದರಲ್ಲಿ 7,95,087 ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಪ್ರಕರಣಗಳ ಪೈಕಿ ಶೇ.79ರಷ್ಟು ಕೇವಲ 10 ರಾಜ್ಯಗಳಲ್ಲಿ ಕಂಡು ಬಂದಿವೆ.

ಒಂದೇ ದಿನ 65,24,596 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಗಳಲ್ಲಿ 837 ಜನ ಸಾವನ್ನಪ್ಪಿದ್ದು, ಇದರಲ್ಲಿ ಶೇ.82ರಷ್ಟು ಜನ ಕೇವಲ 10 ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 1,12,998 ಜನ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 70,816 ಜನ ಕೊರೊನಾದಿಂದ ಗುಣಮುಖರಾಗಿದ್ದು, ಈ ವರೆಗೆ ಒಟ್ಟು 65,24,595 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಲ್ಲಿ ಶೇ.78ರಷ್ಟು ಜನ 10 ರಾಜ್ಯಗಳಲ್ಲಿ ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಗೆಲ್ಲುತ್ತಿರುವವರ ಸಂಖ್ಯೆಯಲ್ಲಿ ಬೆಳವಾನಿಗೆ ಕಾಣುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *