Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಚೂರಿಗೆ ಹರಿಯಲಿದೆ 8 ಲಕ್ಷ ಕ್ಯೂಸೆಕ್ ನೀರು- ಮೂರು ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಯಚೂರಿಗೆ ಹರಿಯಲಿದೆ 8 ಲಕ್ಷ ಕ್ಯೂಸೆಕ್ ನೀರು- ಮೂರು ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧತೆ

Karnataka

ರಾಯಚೂರಿಗೆ ಹರಿಯಲಿದೆ 8 ಲಕ್ಷ ಕ್ಯೂಸೆಕ್ ನೀರು- ಮೂರು ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧತೆ

Public TV
Last updated: October 19, 2020 8:58 am
Public TV
Share
2 Min Read
rcr rain flood
SHARE

– ಜನರಲ್ಲಿ ಹೆಚ್ಚಿದ ಪ್ರವಾಹದ ಆತಂಕ
– ರಾಯಚೂರಿನಲ್ಲಿ ಏರುತ್ತಲೇ ಇದೆ ನೀರಿನ ಪ್ರಮಾಣ

ರಾಯಚೂರು: ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅನಾಹುತ ಸಂಭವಿಸಿದ್ದು, ಜನ ಕಂಗಾಲಾಗಿದ್ದಾರೆ. ಇದೀಗ ಕೆಲ ಜಿಲ್ಲೆಗಳಲ್ಲಿ ಮಳೆ ಹಾಗೂ ಪ್ರವಾಹ ತಗ್ಗಿದೆ. ಆದರೆ ರಾಯಚೂರು ಜಿಲ್ಲೆಯಲ್ಲಿ ಮಾತ್ರ ನೀರಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇಂದು ಸಹ 8 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ಹಾಗೂ ಭೀಮಾ ನದಿಗಳಿಂದ ಬಿಡಲಾಗುತ್ತಿದೆ.

vlcsnap 2020 10 19 08h50m53s150

ಕೃಷ್ಣಾ ನದಿಯಲ್ಲಿ ಪ್ರವಾಹದ ಭೀತಿ ಮುಂದುವರಿದಿದ್ದು, ರಾಯಚೂರಿನಲ್ಲಿ ನೀರಿನ ಪ್ರಮಾಣ ನಿಧಾನವಾಗಿ ಏರಿಕೆಯಾಗುತ್ತಿದೆ. ಭೀಮಾನದಿಯಿಂದ 3.40 ಲಕ್ಷ ಕ್ಯೂಸೆಕ್, ಕೃಷ್ಣಾ ನದಿಯಿಂದ 92 ಸಾವಿರ ಕ್ಯೂಸೆಕ್ ಸೇರಿದಂತೆ ಎರಡೂ ನದಿಗಳಿಂದ 4.32 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದೆ. ಇದರ ಜೊತೆಗೆ ಸೊನ್ನಾ ಬ್ಯಾರೇಜಿನಿಂದ ಬಿಟ್ಟ 8 ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಇಂದು ರಾಯಚೂರು ತಾಲೂಕಿಗೆ ಬಂದು ಸೇರುವ ನಿರೀಕ್ಷೆ ಇದೆ. ಹೀಗಾಗಿ ಪ್ರವಾಹ ಮತ್ತೆ ಹೆಚ್ಚಲಿದೆ.

vlcsnap 2020 10 19 08h50m01s149

ಪ್ರವಾಹ ಏದುರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಒಂದು ಸೇನಾ ಹಾಗೂ ಎನ್‍ಡಿಆರ್‍ಎಫ್ ತಂಡಗಳು ಶಕ್ತಿನಗರದಲ್ಲಿ ಬೀಡು ಬಿಟ್ಟಿವೆ. ನೀರಿನ ಹರಿವು ಹೆಚ್ಚಾದರೆ ಮೂರು ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರ್ಜಾಪುರ, ಬೂರ್ದಿಪಾಡ ಹಾಗೂ ಡಿ ರಾಂಪುರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ.

vlcsnap 2020 10 19 08h47m53s139

ಭೀಮಾ ನದಿಯಿಂದ ಭಾರೀ ಪ್ರಮಾಣದ ನೀರು ಕೃಷ್ಣಾ ನದಿಗೆ ಸೇರುತ್ತಿರುವುದರಿಂದ ರಾಯಚೂರಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ನದಿಪಾತ್ರದ ಗುರ್ಜಾಪುರ ಗ್ರಾಮದ ಜನರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಎರಡು ದಿನಗಳಿಂದ ಗ್ರಾಮದಲ್ಲಿ 13 ಬಸ್ ಗಳನ್ನು ನಿಲ್ಲಿಸಲಾಗಿದೆ. ಆದರೆ ಗ್ರಾಮಸ್ಥರು ಮಾತ್ರ ಊರು ಬಿಟ್ಟು ಬರುತ್ತಿಲ್ಲ. ನದಿಯಲ್ಲಿ ನೀರಿನ ಪ್ರಮಾಣ ಇನ್ನೂ ಹೆಚ್ಚಾದ ಮೇಲೆ ಬರುತ್ತೇವೆ ಎನ್ನುತ್ತಿದ್ದಾರೆ. ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ ಸೇನಾ ಪಡೆ ಹಾಗೂ ಎನ್‍ಡಿಆರ್‍ಎಫ್ ತಂಡಗಳನ್ನು ಕರೆಯಿಸಿಕೊಂಡಿದೆ. ಗ್ರಾಮಸ್ಥರು ಮಾತ್ರ ಸದ್ಯಕ್ಕೆ ನಮಗೆ ಭಯವಿಲ್ಲ ಎಂದು ಗ್ರಾಮದಲ್ಲೇ ಉಳಿದಿದ್ದಾರೆ.

vlcsnap 2020 10 18 07h34m47s66

ಡಿಸಿಎಂ ಸವದಿ ಭೇಟಿ
ಕೊನೆಗೂ ನೆರೆ ಪೀಡಿತ ಪ್ರದೇಶದತ್ತ ಡಿಸಿಎಂ ಹಾಗೂ ರಾಯಚೂರು ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಮುಖ ಮಾಡುತ್ತಿದ್ದಾರೆ. ಇಂದು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಬೆಳಗ್ಗೆ 11:30ಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 2:30ರ ವರೆಗೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ.

TAGGED:floodnorth karnatakaPublic TVraichurrainಉತ್ತರ ಕರ್ನಾಟಕಪಬ್ಲಿಕ್ ಟಿವಿಪ್ರವಾಹಮಳೆರಾಯಚೂರು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
12 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
44 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
54 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
60 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
1 hour ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?