Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ- ವಾಯುವ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ಚೇತರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ- ವಾಯುವ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ಚೇತರಿಕೆ

Dharwad

ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ- ವಾಯುವ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ಚೇತರಿಕೆ

Public TV
Last updated: October 22, 2020 10:42 pm
Public TV
Share
2 Min Read
nwkrtc bus
SHARE

ಹುಬ್ಬಳ್ಳಿ: ಲಾಕ್‍ಡೌನ್ ಬಹುತೇಕ ಸಡಿಲಿಗೊಳಿಸಿದ ಹಿನ್ನೆಲೆಯಲ್ಲಿ ಜನರ ಕೋವಿಡ್ ಪೂರ್ವ ಸ್ಥಿತಿಗೆ ಮರಳುತ್ತಿದ್ದು, ಇದರೊಂದಿಗೆ ಬಸ್ ಪ್ರಯಾಣಿಕರ ಸಂಖ್ಯೆಯೂ ಏರಿಕೆಯಾಗಿದೆ. ಕಳೆದ ತಿಂಗಳಿಗಿಂತ ಅಕ್ಟೋಬರ್ ನಲ್ಲಿ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ಸಾರಿಗೆ ಆದಾಯ ಹೆಚ್ಚಾಗಿದ್ದು, ಮತ್ತಷ್ಟು ಮಾರ್ಗಗಳಲ್ಲಿ ಬಸ್ಸುಗಳನ್ನು ಹೆಚ್ಚಿಸಲಾಗಿದೆ.

ಲಾಕ್‍ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಲ್ಲಿ 419 ಬಸ್ಸುಗಳು ಪ್ರತಿದಿನ 1.63 ಲಕ್ಷ ಕಿ.ಮೀ ಸಂಚರಿಸುತ್ತಿದ್ದವು. 1.25 ಲಕ್ಷ ಜನರಿಂದ 1.35 ಲಕ್ಷ ಜನರು ಪ್ರತಿದಿನ ಪ್ರಯಾಣ ಮಾಡುತ್ತಿದ್ದರು. ಸಂಸ್ಥೆಗೆ ಸುಮಾರು 45 ರಿಂದ 50 ಲಕ್ಷ ರೂ. ಆದಾಯ ಸಂಗ್ರಹವಾಗುತ್ತಿತ್ತು. ಆಗಸ್ಟ್ ಅಂತ್ಯಕ್ಕೆ ಪ್ರತಿದಿನ 255 ಬಸ್ಸುಗಳು 60 ಸಾವಿರ ಕಿ.ಮೀ. ಸಂಚರಿಸುತ್ತಿದ್ದು, 30 ರಿಂದ 35 ಸಾವಿರ ಜನರು ಪ್ರಯಾಣ ಮಾಡುತ್ತಿದ್ದರು. ನಿತ್ಯ 16 ರಿಂದ 18 ಲಕ್ಷ ರೂ. ಆದಾಯ ಬರುತ್ತಿತ್ತು.

nwkrtc bus ksrtc

ಸೆಪ್ಟೆಂಬರ್ ಅಂತ್ಯಕ್ಕೆ ಪ್ರತಿದಿನ 325 ಬಸ್ಸುಗಳು 90 ಸಾವಿರ ಕಿ.ಮೀ ಸಂಚರಿಸುತ್ತಿದ್ದವು. 48 ರಿಂದ 50 ಸಾವಿರ ಜನರು ಪ್ರಯಾಣ ಮಾಡುತ್ತಿದ್ದರು. 22 ಲಕ್ಷ ರೂ. ಆದಾಯ ಬರುತ್ತಿತ್ತು. ಈಗ ನಿತ್ಯ 345 ರಿಂದ 350 ಬಸ್ಸುಗಳು 1.05 ರಿಂದ 1.10 ಲಕ್ಷ ಕಿ.ಮೀ. ಸಂಚರಿಸುತ್ತಿವೆ. 57 ರಿಂದ 59 ಸಾವಿರ ಜನರು ಪ್ರಯಾಣ ಮಾಡುತ್ತಿದ್ದಾರೆ. ನಿತ್ಯ 26 ರಿಂದ 28 ಲಕ್ಷ ರೂ. ಆದಾಯ ಬರುತ್ತಿದೆ.

ಲಾಕ್‍ಡೌನ್ ಪೂರ್ವದಲ್ಲಿ ಅಂತರ ರಾಜ್ಯಗಳಲ್ಲಿ ಸಂಚರಿಸುವ ಬಸ್ಸುಗಳಿಂದ ಅದರಲ್ಲೂ ಪ್ರಮುಖವಾಗಿ ಮಹಾರಾಷ್ಟ್ರ ರಾಜ್ಯದಲ್ಲಿ ಸಂಚರಿಸುವ ಬಸ್ಸುಗಳಿಂದ ಹೆಚ್ಚಿನ ಆದಾಯ ಬರುತ್ತಿತ್ತು. ಲಾಕ್‍ಡೌನ್ ನಂತರದಲ್ಲಿ ಗೋವಾ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಂಚರಿಸುವ ಬಸ್ಸುಗಳಲ್ಲಿ ಉತ್ತಮ ಆದಾಯ ಬರುತ್ತಿದೆ. ಇತ್ತೀಚೆಗೆ ಸುರಿಯುತ್ತಿರುವ ಮಹಾ ಮಳೆ ಹಾಗೂ ನೆರೆಹಾವಳಿಯಿಂದಾಗಿ ಪ್ರಯಾಣಿಕರ ಸಂಖ್ಯೆ ಕೊಂಚ ಕಡಿಮೆಯಾಗಿದೆ.

NWKRTC

ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಕೆಲವು ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತಿ ಕಡಿಮೆ ಇದ್ದು, ಸಂಸ್ಥೆಗೆ ಹೆಚ್ಚು ನಷ್ಟ ಉಂಟಾಗುತ್ತಿದೆ. ಆದರೆ ಈ ಪ್ರದೇಶಗಳಲ್ಲಿ ಹೆಚ್ಚಾಗಿರುವ ಬಡವರು ಹಾಗೂ ಮಧ್ಯಮ ವರ್ಗದ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಸಂಸ್ಥೆಯ ಬಸ್ಸುಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ಈ ಬಸ್ಸುಗಳ ಕಾರ್ಯಚರಣೆಯನ್ನು ಮುಂದುವರಿಸಲಾಗುತ್ತಿದೆ.

ಇದೀಗ ಅಧಿಕಮಾಸ ಮುಕ್ತಾಯಗೊಂಡಿದೆ. ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಮದುವೆ ಮತ್ತಿತರ ಶುಭ ಕಾರ್ಯಗಳು, ಸಭೆ, ಸಮಾರಂಭಗಳು ಮತ್ತೆ ಪ್ರಾರಂಭವಾಗಿವೆ. ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ಹೆಚ್ಚಿನ ಪ್ರಯಾಣಿಕರ ಸಂಚಾರ ನಿರೀಕ್ಷಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಾರಿಗೆ ಆದಾಯ ಉತ್ತಮಗೊಳ್ಳುವ ವಿಶ್ವಾಸವಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.

KSRTC 1

TAGGED:Corona VirushubliLockdownNorthwest TransportPublic TVಕೊರೊನಾ ವೈರಸ್ಪಬ್ಲಿಕ್ ಟಿವಿಲಾಕ್‍ಡೌನ್ವಾಯುವ್ಯ ಸಾರಿಗೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
35 minutes ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
39 minutes ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
57 minutes ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
1 hour ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
1 hour ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?