ಮಹಾದೇವ ಸಾಹುಕಾರ್ ಮೇಲೆ ಗುಂಡಿನ ದಾಳಿ ಪ್ರಕರಣ- ಮತ್ತೆ ಐವರ ಬಂಧನ

Public TV
1 Min Read
BIJ Mahadeva Sahukar Bhairagond case copy

ವಿಜಯಪುರ: ಭೀಮಾತೀರದ ಹಂತಕ ಮಹಾದೇವ ಸಾಹುಕಾರ್ ಮೇಲಿನ ಫೈರಿಂಗ್ ಪ್ರಕರಣದಲ್ಲಿ ಮತ್ತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಎಸ್‍ಪಿ ಅನುಪಮ್ ಅಗರವಾಲ್ ಅವರು, ವಿಜಯಪುರದ ಅತಾಲಟ್ಟಿ ಗ್ರಾಮದ ಯಾಶೀನ್ ದಂದರಗಿ (25), ಗೂಳಿ ಸೊನ್ನದ (25), ಸಿದ್ದರಾಯ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಚಿನ ಮಾನವರ (28) ಹಾಗೂ ಚಡಚಣದ ರವಿ ಬಂಡಿ (20) ಬಂಧಿತ ಆರೋಪಿಗಳಾಗಿದ್ದಾರೆ ಎಂದರು.

BIJ SHOOTOUT a

ಮಹಾದೇವ ಸಾಹುಕಾರ್ ಹತ್ಯೆಯ ಕೃತ್ಯಕ್ಕೆ ಬಳಸಿದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ಜಪ್ತಿ ಮಾಡಲಾಗಿದೆ. ಇಲ್ಲಿವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್‍ಪಿ ಅಗರವಾಲ್ ಮಾಹಿತಿ ನೀಡಿದ್ದಾರೆ.

BIJ SHOOTOUT c

Share This Article
Leave a Comment

Leave a Reply

Your email address will not be published. Required fields are marked *