Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸ್ಕಿ ಉಪ ಚುನಾವಣೆ – ಕೈ, ಕಮಲದಿಂದ 5ಎ ಕಾಲುವೆ ಅಸ್ತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಸ್ಕಿ ಉಪ ಚುನಾವಣೆ – ಕೈ, ಕಮಲದಿಂದ 5ಎ ಕಾಲುವೆ ಅಸ್ತ್ರ

Bengaluru City

ಮಸ್ಕಿ ಉಪ ಚುನಾವಣೆ – ಕೈ, ಕಮಲದಿಂದ 5ಎ ಕಾಲುವೆ ಅಸ್ತ್ರ

Public TV
Last updated: November 25, 2020 11:14 am
Public TV
Share
2 Min Read
Maski By Election 5A canal
SHARE

– 5ಎ ಕಾಲುವೆಗಾಗಿ ನಿಲ್ಲದ ರೈತರ ಹೋರಾಟ

ರಾಯಚೂರು: ಮಸ್ಕಿ ಉಪಚುನಾವಣಾ ಅಖಾಡ ಕಾಂಗ್ರೆಸ್ ಹಾಗೂ ಬಿಜೆಪಿಗೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ನೀರಾವರಿ ಯೋಜನೆಗಳೆ ಎರಡೂ ಪಕ್ಷದ ಪ್ರಚಾರದ ಅಸ್ತ್ರವಾಗಿದೆ. 5 ಎ ಕಾಲುವೆ ಅಸ್ತ್ರದೊಂದಿಗೆ ರಾಜಕಾರಣಿಗಳು ಆರೋಪ ಪ್ರತ್ಯಾರೋಪಕ್ಕೆ ಮುಂದಾಗಿದ್ದಾರೆ. ಆದರೆ ರೈತರು ಮಾತ್ರ ಯಾವ ರಾಜಕಾರಣಿಗಳನ್ನೂ ನಂಬದೇ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ನಿರಂತರ ಹೋರಾಟ ನಡೆಸಿದ್ದಾರೆ.

5a canal protest

ಮಸ್ಕಿ ಕ್ಷೇತ್ರದ ಎಡಕ್ಕೆ ತುಂಗಭದ್ರಾ ನದಿ ಇದ್ರೆ, ಬಲಕ್ಕೆ ನಾರಾಯಣಪುರ ಜಲಾಶಯ ಇದೆ. ರಾಜ್ಯದ ಪ್ರಮುಖ ನದಿಗಳು ಮಸ್ಕಿ ಕ್ಷೇತ್ರಕ್ಕೆ ಹೊಂದಿಕೊಂಡೇ ಹರಿಯುತ್ತಿದ್ರೂ ದಶಕಗಳಿಂದ ಈ ಭಾಗದ ರೈತರಿಗೆ ನೀರಾವರಿ ವ್ಯವಸ್ಥೆ ಮಾಡಿಕೊಡುವಲ್ಲಿ ಸರ್ಕಾರಗಳು ವಿಫವಾಗಿವೆ. ಎನ್.ಆರ್.ಬಿ.ಸಿ. 5 ಎ ಕಾಲುವೆಗಾಗಿ ರೈತರು 2008 ರಿಂದ ಹೋರಾಟ ನಡೆಸಿದ್ದರು ಯೋಜನೆ ಜಾರಿಯಾಗಿಲ್ಲ. ಪ್ರತಾಪ್ ಗೌಡ ಪಾಟೀಲ್ ಒಂದು ಬಾರಿ ಬಿಜೆಪಿ ಎರಡು ಬಾರಿ ಕಾಂಗ್ರೆಸ್ ನಿಂದ ಶಾಸಕರಾದ್ರೂ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿಲ್ಲ. ಆದ್ರೆ ಈಗ ರೈತರ ಹೋರಾಟ ತೀವ್ರ ಸ್ಪರೂಪ ಪಡೆಯುತ್ತಿರುವುದರಿಂದ ಉಪಚುನಾವಣೆಗೆ 5 ಎ ಕಾಲುವೆಯನ್ನೇ ಅಸ್ತ್ರಮಾಡಿಕೊಂಡು ಚುನಾವಣಾ ಪ್ರಚಾರ ನಡೆಸಿದ್ದಾರೆ. ಇತ್ತೀಚಗೆ ಮಸ್ಕಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 5ಎ ಕಾಲುವೆ ಬಗ್ಗೆ ಪ್ರತಾಪಗೌಡ ಪಾಟೀಲ್ ಗೆ ಆಸಕ್ತಿಯೇ ಇರಲಿಲ್ಲ. ಕಾಲುವೆ ಬಗ್ಗೆ ಮಾತನಾಡಲು ಕರೆದರೆ ಇಚ್ಛಾಶಕ್ತಿಯನ್ನೇ ತೋರಿಸಿಲ್ಲ ಅಂತ ಆರೋಪಿಸಿದ್ದಾರೆ. ಈ ಮೂಲಕ ಕಾಂಗ್ರೆಸ್, ಬಿಜೆಪಿ 5 ಎ ಕಾಲುವೆಯನ್ನೆ ಪ್ರಚಾರ ವಸ್ತು ಮಾಡಿಕೊಂಡಿದ್ದಾರೆ.

DKSHi Pratap gowda 5A cana

ನಾವು ಯಾವ ರಾಜಕಾರಣಿಯನ್ನೂ ನಂಬಲ್ಲ ಮೊದಲು ಕಾಲುವೆ ಆರಂಭಿಸಿ ಅಂತ ರೈತರು ಮಾತ್ರ ನಿರಂತರ ಹೋರಾಟ ನಡೆಸಿದ್ದಾರೆ. ನಾರಾಯಣಪುರ ಬಲದಂಡೆ ಕಾಲುವೆಯಿಂದ ಲಿಂಗಸುಗೂರಿನ ಕಾಳಾಪುರದಿಂದ 5ಎ ಕಾಲುವೆ ಕಾಮಗಾರಿ ಆರಂಭವಾಗಬೇಕಿದೆ. ಮಸ್ಕಿ, ಮಾನ್ವಿ, ಸಿರವಾರ, ರಾಯಚೂರು ತಾಲೂಕು ಹಾಗೂ ಕೊಪ್ಪಳ ಜಿಲ್ಲೆಯ ಕೆಲ ಹಳ್ಳಿಗಳು ಸೇರಿಕೊಂಡು ಒಟ್ಟಾರೆ 107 ಹಳ್ಳಿಗಳ 1 ಲಕ್ಷ 77 ಸಾವಿರದ 912 ಎಕರೆ ನೀರಾವರಿ ನೀರಾವರಿ ವಂಚಿತವಾಗಿದೆ. ಮಸ್ಕಿ ತಾಲೂಕಿನ ಒಂದರಲ್ಲೇ 58 ಹಳ್ಳಿಗಳ 77 ಸಾವಿರ ಎಕರೆ ಭೂಮಿ ನೀರಾವರಿ ವಂಚಿತವಾಗಿದೆ. ಅಲ್ಲದೇ ಈ ಯೋಜನೆ ಪ್ರಾರಂಭ ಆದ್ರೆ ಮಸ್ಕಿ ಕ್ಷೇತ್ರ ವ್ಯಾಪ್ತಿಯಲ್ಲಿನ 5 ಕೆರೆಗಳನ್ನ ತುಂಬಿಸುವ ಯೋಜನೆಯೂ ಇದರಲ್ಲಿ ಒಳಪಡುತ್ತೆ. ಇದುವರೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯೋಜನೆ ಅನುಷ್ಠಾನಕ್ಕೆ ಮುಂದಾಗಿಲ್ಲ. ಹೀಗಾಗಿ ರೈತರು ಹೋರಾಟಕ್ಕೆ ಮುಂದಾಗಿದ್ದಾರೆ.

BSY DKSHI

ಕಳೆದ ಒಂದು ದಶಕದಿಂದ 5 ಎ ಕಾಲುವೆಗಾಗಿ ರೈತರು ನಾನಾ ಹೋರಾಟಗಳನ್ನ ಮಾಡಿದರೂ ಕೃಷ್ಣಾ ಭಾಗ್ಯ ಜಲಾ ನಿಗಮ ನಿಯಮಿತದ ಅಧಿಕಾರಿಗಳು, ಶಾಸಕ, ಸಂಸದರು ಸೇರಿದಂತೆ ಸರ್ಕಾರದಿಂದಲೂ ಯಾವ ಸ್ಪಂದನೆಯೂ ಸಿಕ್ಕಿಲ್ಲ. ಕಾಲುವೆ ನಿರ್ಮಿಸಲು ಡಿಪಿಆರ್ ತಯಾರಾಗಿ ವರ್ಷಗಳೇ ಉರುಳಿದ್ರೂ 5ಎ ಕಾಮಗಾರಿ ಆರಂಭಗೊಂಡಿಲ್ಲ. ಉಪಚುನಾವಣೆಯ ಪ್ರಚಾರದಲ್ಲಿ ಮಾತ್ರ ಕಾಲುವೆಯದ್ದೇ ಮಾತು.

TAGGED:5 ಎ ಕಾಲುವೆ5A Canalbjpby electioncongressDK ShivakumarfarmersMaski By ElectionPratap Gowda PatilPublic TVಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಪ್ರತಾಪ್ ಗೌಡ ಪಾಟೀಲ್ಬಿಜೆಪಿಬೈ ಎಲೆಕ್ಷನ್ಮಸ್ಕಿ ಉಪ ಚುನಾವಣೆರೈತರು
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
6 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
54 minutes ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Hassan Innova Car Overturn
Districts

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?