ರಸ್ತೆ ಕ್ರಾಸ್ ಮಾಡೋವಾಗ ವೇಗವಾಗಿ ಬಂದು ಬೈಕ್ ಮೇಲೆ ಹರಿದ ಲಾರಿ!

Public TV
1 Min Read
MNG 3

– ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು ಭೀಕರ ರಸ್ತೆ ಅಪಘಾತ ನಡೆದಿದೆ. ಸುರತಕ್ಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

MNG 2

ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ ಗೆ ಡಿಕ್ಕಿಯಾಗಿದೆ.

MNG 1

ಡಿಕ್ಕಿಯಾದ ರಭಸಕ್ಕೆ ಬೈಕ್ ಹಾಗೂ ಸವಾರನನ್ನು ಲಾರಿ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

MNG

ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *