23 ರನ್‌ ಹೊಡೆದು ವಿಶ್ವದಾಖಲೆ ನಿರ್ಮಿಸಿದ ಕೊಹ್ಲಿ

Public TV
1 Min Read
Virat Kohli

ಕ್ಯಾನ್ಬೆರಾ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆ ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೆ ವೇಗವಾಗಿ 12 ಸಾವಿರ ರನ್‌ಗಳ ಗಡಿಯನ್ನು ದಾಟಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ಮೊದಲ ಸ್ಥಾನಲ್ಲಿದ್ದರು. ಆದರೆ ಈಗ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ 23 ರನ್‌ ಗಳಿಸುವ ಮೂಲಕ ಈ ಪಟ್ಟಿಯಲ್ಲಿ ನಂಬರ್‌ ಒನ್‌ ಸ್ಥಾನಕ್ಕೆ ಏರಿದ್ದಾರೆ.

kohli sachin

ಸಚಿನ್ 300 ಇನ್ನಿಂಗ್ಸ್‌ಗಳಲ್ಲಿ 12 ಸಾವಿರ ಏಕದಿನ ರನ್ ಗಳಿಸಿದರೆ ಕೊಹ್ಲಿ 251 ಪಂದ್ಯಗಳ 242 ಇನ್ನಿಂಗ್ಸ್ ಗಳಲ್ಲಿ 12 ಸಾವಿರ ರನ್‌ ಪೂರ್ಣಗೊಳಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ಕೊಹ್ಲಿ ತಮ್ಮ 241 ಇನ್ನಿಂಗ್ಸ್‌ಗಳ ಆಟದಲ್ಲಿ 11,977 ರನ್‌ ಹೊಡೆದಿದ್ದರು.

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 314 ಇನ್ನಿಂಗ್ಸ್, ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ 336 ಇನ್ನಿಂಗ್ಸ್, ಸನತ್ ಜಯಸೂರ್ಯ 379 ಇನ್ನಿಂಗ್ಸ್ ಮತ್ತು ಮಹೇಲಾ ಜಯವರ್ಧನೆ 399 ಇನ್ನಿಂಗ್ಸ್ ಗಳಲ್ಲಿ 12 ಸಾವಿರ ರನ್‌ಗಳ ಗಡಿ ದಾಟಿದ್ದರು.

Virat Kohli

ಇದಕ್ಕೂ ಮೊದಲು ಸಚಿನ್ ಅವರ ವೇಗದ 10 ಸಾವಿರ ರನ್ ಪೂರೈಸಿದ ದಾಖಲೆಯನ್ನು ಬ್ರೇಕ್ ಮಾಡಿದ್ದ ಕೊಹ್ಲಿ, ಕೇವಲ 205 ಇನ್ನಿಂಗ್ಸ್ ಗಳಲ್ಲಿ 10 ಸಾವಿರ ರನ್ ಬಾರಿಸಿದ್ದರು. ಸಚಿನ್ 10 ಸಾವಿರ ರನ್ ಹೊಡೆಯಲು 259 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರು. ಇದರ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 89 ರನ್ ಗಳಿಸಿದ್ದ ಕೊಹ್ಲಿ ವೇಗವಾಗಿ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 22 ಸಾವಿರ ರನ್ ಹೊಡೆದ ಆಟಗಾರ ಎಂಬ ಸಾಧನೆ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *