ಮಂಗಳೂರು: ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಮೂವರ ಬಂಧನವಾಗಿದೆ.
ಕಳೆದ ನವೆಂಬರ್ 27 ರಂದು ಮಂಗಳೂರಿನ ಬಿಜೈ ಹಾಗೂ ನ.30 ರಂದು ಕೋರ್ಟ್ ರಸ್ತೆಯಲ್ಲಿ ಗೋಡೆ ಬರಹ ಪತ್ತೆಯಾಗಿತ್ತು. ಬರಹದಲ್ಲಿ ಲಷ್ಕರ್ ಉಗ್ರರ ಪರವಾಗಿ ಹಾಗೂ ಮುಸ್ಲಿಂ ಧರ್ಮದ ಪರವಾಗಿ ಬರೆಯಲಾಗಿತ್ತು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕದ್ರಿ ಪೊಲೀಸರು ನಾಲ್ಕು ತಂಡಗಳಾಗಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದು, ಎರಡು ದಿನದ ಹಿಂದೆ ಶಿವಮೊಗ್ಗದ ತೀರ್ಥಹಳ್ಳಿಯ ಮಾಝ್ ಅಹಮ್ಮದ್ ಎಂಬಾತನನ್ನು ಬಂಧಿಸಲಾಗಿತ್ತು. ಆತನ ಮಾಹಿತಿಯಂತೆ ಬೆಂಗಳೂರು ಹಾಗೂ ತೀರ್ಥಹಳ್ಳಿಯಿಂದ ಇಬ್ಬರನ್ನು ಬಂಧಿಸಲಾಗಿದೆ.
ಆರೋಪಿಗಳ ಹಿನ್ನೆಲೆ ಅವರ ಸಂಪರ್ಕ ಹಾಗೂ ಬರಹದ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.