ಹೆದ್ದಾರಿಯಲ್ಲಿ ಧಗ ಧಗಿಸಿದ ಚಲಿಸುತ್ತಿದ್ದ ಟ್ರಕ್

Public TV
1 Min Read
mumbai 1 1607175043

– ಪ್ರಾಣಾಪಾಯದಿಂದ ಪಾರಾದ ಚಾಲಕ

ಮುಂಬೈ: ಪುಣೆಯ ಚಾಂದಿನಿ ಚೌಕ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಟ್ರಕ್ ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ ಟ್ರಕ್ ನಿಲ್ಲಿಸಿ ಕೆಳಗೆ ಇಳಿದಿದ್ದರಿಂದ ಬದುಕುಳಿದಿದ್ದಾನೆ.

ಶನಿವಾರ ಸಂಜೆ 5.30ಕ್ಕೆ ಈ ಅವಘಡ ಸಂಭವಿಸಿದ್ದು, ಚಾಂದಿನಿ ಚೌಕ್ ಬಳಿಯ ವಾರ್ಜೆ ಸೇತುವೆ ಸುಮಾರು ಒಂದು ಗಂಟೆಗಳ ಕಾಲ ಹೊತ್ತಿ ಉರಿದಿದ್ದರಿಂದ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಿಲೋ ಮೀಟರ್ ಗಟ್ಟಲೇ ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಟ್ರಕ್ ನಲ್ಲಿಯ ಇಂಜಿನ್ ದೋಷದಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *