ಬೆಂಗಳೂರು: ಇಂದು ಕರ್ನಾಟಕದಲ್ಲಿ 815 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 1,377 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,23,353ಕ್ಕೆ ಏರಿಕೆ ಆಗಿದೆ. ಈ ಪೈಕಿ 9,01,579 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,637 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಇಲ್ಲಿಯವರೆಗೆ 12,118 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 194 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 11,445 ಆಂಟಿಜನ್ ಟೆಸ್ಟ್, 1,11,622 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 1,23,067 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 393, ಮೈಸೂರು 57 ದಕ್ಷಿಣ ಕನ್ನಡ 44, ಹಾಸನದಲ್ಲಿ 33 ಮಂದಿಗೆ ಸೋಂಕು ಬಂದಿದೆ.
ಐಸಿಯುನಲ್ಲಿಒಟ್ಟು 194 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 83, ಕಲಬುರಗಿ 15, ತುಮಕೂರು 14, ಹಾಸನದಲ್ಲಿ 10 ಮಂದಿ ಐಸಿಯುನಲ್ಲಿದ್ದಾರೆ.