ಧಾರವಾಡ/ಹುಬ್ಬಳ್ಳಿ: ಕಬ್ಬಿಣದ ವಸ್ತುಗಳನ್ನ ಹೊತ್ತುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನವನಗರದ ಬಳಿ ನಡೆದಿದೆ.
ಮಧ್ಯಪ್ರದೇಶದ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ರ್ಯಾಕ್ಟರ್‍ಲ್ಟಿಯಾಗಿದ್ದರಿಂದ ಮಹಿಳಾ ಕೂಲಿ ಕಾರ್ಮಿಕರಿಗೆ ಕೆಳಗೆ ಬಿದ್ದಿದ್ದರಿಂದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ನವನಗರದ ಪ್ರಮುಖ ಸ್ಥಳದಲ್ಲಿಯೇ ಘಟನೆ ನಡೆದಿದ್ದರಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಉತ್ತರ ಸಂಚಾರ ಠಾಣೆಯ ಪೊಲೀಸರು ಹಾಗೂ ತುರ್ತು ಸೇವೆ ಹಾಗೂ ಅಗ್ನಿಶಾಮಕ ಇಲಾಖೆಯ ಡಿಎಫ್‍ಒ ವಿನಾಯಕ ಕಲ್ಗುಟಕರ್, ಎಂ.ಆರ್.ಕಾತರಕಿ, ಶ್ರೀ ರಾಯಾಭಾಗ ಹಾಗೂ ಪ್ರವೀಣಕುಮಾರ ಅವರು ದೌಡಾಯಿಸಿ ಗಾಯಾಗೊಂಡವರ ರಕ್ಷಣೆಗೆ ಮುಂದಾಗಿದ್ದಾರೆ.