ಬೀದಿ ನಾಯಿ ಮೇಲೆ ಅತ್ಯಾಚಾರ- ವಿಕೃತ ಕಾಮಿಗೆ 6 ತಿಂಗಳು ಜೈಲು ಶಿಕ್ಷೆ

Public TV
1 Min Read
court 1

– ಪಾಸ್‍ಪೋರ್ಟ್ ಕಚೇರಿ ಬಳಿ ಇದ್ದ ನಾಯಿ ಮೇಲೆ ಅತ್ಯಾಚಾರ

ಮುಂಬೈ: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ ವ್ಯಕ್ತಿಗೆ ಕೋರ್ಟ್ 6 ತಿಂಗಳು ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿದೆ.

ಕಳೆದ ಜುಲೈನಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ಇದೀಗ ಥಾಣೆ ಜಿಲ್ಲಾ ನ್ಯಾಯಾಲಯ ಅಪರಾಧಿಗೆ 6 ತಿಂಗಳು ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಅಪರಾಧಿಯನ್ನು ವಿಜಯ್ ಚಾಕ್ಲೆ(40) ಎಂದು ಗುರುತಿಸಲಾಗಿದ್ದು, ವಾಗ್ಲೆ ಎಸ್ಟೇಟ್ ನಿವಾಸಿಯಾಗಿದ್ದಾನೆ. ಈತ ಇತರೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದ. ಮುಖ್ಯವಾಗಿ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಕೆಲಸದಲ್ಲಿ ತೊಡಗಿದ್ದ. ಅಲ್ಲದೆ ಡ್ರಗ್ ವ್ಯಸನಿಯಾಗಿದ್ದ ಎಂದು ವರದಿಯಾಗಿದೆ.

DOG

ಪ್ರಥಮ ದರ್ಜೆ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ವಿ.ಪಿ.ಖಂಡಾರೆ ಅವರು ತೀರ್ಪು ಪ್ರಕಟಿಸಿದ್ದಾರೆ. ಐಪಿಸಿ ಸೆಕ್ಷನ್ 377(ಅಸ್ವಾಭಾವಿಕ ಲೈಂಗಿಕತೆ) ಅಡಿ ಆರೋಪ ಸಾಬೀತಾಗಿದ್ದರಿಂದ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಯುವಿಕೆ ಅಡಿ 1,050 ರೂ.ದಂಡವನ್ನು ಸಹ ವಿಧಿಸಿದ್ದಾರೆ.

Police Jeep 1 2 medium

ಬೀದಿ ನಾಯಿ ಥಾಣೆಯ ಹಳೆ ಪಾಸ್‍ಪೋರ್ಟ್ ಕಚೇರಿ ಬಳಿ ಇದ್ದಾಗ ಪ್ರಕರಣ ನಡೆದಿದೆ. ಕೆಲ ಸ್ಥಳೀಯರು ಬೀದಿ ನಾಯಿಗಳಿಗೆ ಆಹಾರ ನೀಡಲು ಹೋದಾಗ ನಾಯಿ ಮೇಲೆ ಅತ್ಯಾಚಾರ ನಡೆಯುತ್ತಿದ್ದುದು ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರು ಪ್ರಾಣಿ ದಯಾ ಸಂಘದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಘಟನೆ ಕುರಿತು ಪೊಲೀಸರಿಗೆ ತಿಳಿಸಲಾಗಿದೆ. ಶ್ರೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು. ಮತ್ತೊಮ್ಮೆ ಈ ರೀತಿಯ ಘಟನೆ ಮರುಕಳಿಸದಂತೆ ಕಠಿಣ ಶಿಕ್ಷೆ ವಿಧಿಸುವಂತೆ ಪ್ರಾಣಿ ದಯಾ ಸಂಘದವರು ಮನವಿ ಮಾಡಿದ್ದರು. ಅದರಂತೆ ಕೋರ್ಟ್ ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಿದೆ.

Share This Article
Leave a Comment

Leave a Reply

Your email address will not be published. Required fields are marked *