ನಿಂತಿದ್ದ ಟ್ರ್ಯಾಕ್ಟರಿಗೆ ಕಾರು ಡಿಕ್ಕಿ – ಮೂವರು ಪ್ರಾಣಾಪಾಯದಿಂದ ಪಾರು

Public TV
1 Min Read
CKM CAR 4

– ಕಾರಿನ ಮುಂಭಾಗದಿಂದ ಒಳ ಬಂದ ಮರದ ದಿಣ್ಣೆಗಳು

ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‍ ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಗ್ರಾಮದ ಬಳಿ ನಡೆದಿದೆ.

CKM CAR 2

ಸಿಲ್ವರ್ ಮರಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮರದ ದಿಣ್ಣೆಯನ್ನು ತುಂಬಿಕೊಂಡು ಮೂಕ್ತಿಹಳ್ಳಿ ಸಮೀಪ ರಸ್ತೆ ಬದಿ ನಿಂತಿತ್ತು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

CKM CAR 3

ಕಾರು ಡಿಕ್ಕಿಯಾದ ರಭಸಕ್ಕೆ ಟ್ರ್ಯಾಕ್ಟರ್‍ ನಲ್ಲಿ ಲೋಡ್ ಮಾಡಿದ ಮರದ ತುಂಡುಗಳು ಕಾರಿನ ಮುಂಭಾಗದ ಗಾಜನ್ನು ಒಡೆದು ಒಳ ಬಂದಿದೆ. ಕಾರಿನಲ್ಲಿ ಮೂವರು ಸಂಚರಿಸುತ್ತಿದ್ದರು. ಗುದ್ದಿದ ರಭಸಕ್ಕೆ ಮೂವರಿಗೂ ಗಾಯವಾಗಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ckm 4

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೂವರು ಮಂಗಳೂರು ಮೂಲದವರಾಗಿದ್ದಾರೆ. ಅಡಿಕೆ ವ್ಯಾಪಾರಕ್ಕೆಂದು ಚಿಕ್ಕಮಗಳೂರಿಗೆ ಬಂದವರೆಂದು ತಿಳಿದು ಬಂದಿದೆ. ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *