Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಡಾನೆ ಸವಾರಿಗೆ ಗ್ರಾಮಸ್ಥರಿಂದಲೇ ಎಸ್ಕಾರ್ಟ್- ಸುಳ್ಯದಲ್ಲೊಂದು ಅಪರೂಪದ ವಿದ್ಯಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಡಾನೆ ಸವಾರಿಗೆ ಗ್ರಾಮಸ್ಥರಿಂದಲೇ ಎಸ್ಕಾರ್ಟ್- ಸುಳ್ಯದಲ್ಲೊಂದು ಅಪರೂಪದ ವಿದ್ಯಮಾನ

Districts

ಕಾಡಾನೆ ಸವಾರಿಗೆ ಗ್ರಾಮಸ್ಥರಿಂದಲೇ ಎಸ್ಕಾರ್ಟ್- ಸುಳ್ಯದಲ್ಲೊಂದು ಅಪರೂಪದ ವಿದ್ಯಮಾನ

Public TV
Last updated: January 31, 2021 1:44 pm
Public TV
Share
2 Min Read
elephant web 1
SHARE

ಮಂಗಳೂರು: ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಬಹಳಷ್ಟು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪೈಕಿ ಮನುಷ್ಯನಿಂದ ಹೆಚ್ಚು ತೊಂದರೆಗೊಳಗಾಗುವ ಮುಗ್ಧ, ಅಮಾಯಕ ಜೀವಿ ಎಂದರೆ ಅದು ಆನೆಗಳು. ಹೀಗಾಗಿ ಆನೆಗಳಿಗೂ, ಮನುಷ್ಯನಿಗೂ ನಡುವೆ ಇರುವ ಸಂಬಂಧ ಅಷ್ಟಕಷ್ಟೇ. ಎಷ್ಟೇ ಸಾಕಿ ಬೆಳೆಸಿದ ಆನೆಯೂ ಕೆಲವು ಸಂದರ್ಭಗಳಲ್ಲಿ ತನ್ನನ್ನು ಸಾಕಿದ ಮಾವುತನನ್ನೇ ಬಲಿ ಪಡೆದ ಉದಾಹರಣೆಗಳು ನಮ್ಮ ಮುಂದಿದೆ. ಸಾಕಾನೆಗಳೇ ಇಷ್ಟು ಅಪಾಯಕಾರಿಯಾಗಿರುವಾಗ ಇನ್ನು ಕಾಡಾನೆಗಳ ಸ್ವಭಾವವನ್ನು ಅರಿತುಕೊಳ್ಳುವುದು ಸಾಧ್ಯವೇ? ಖಂಡಿತಾ ಇಲ್ಲ ಎಂದು ನಾವೆಲ್ಲ ಅಂದುಕೊಳ್ಳಬಹುದು. ಆದರೆ ಅದಕ್ಕೆ ಅಪವಾದ ಎನ್ನುವಂತೆ ಅಪರೂಪದ ಆನೆ-ಮನುಷ್ಯನ ಬಾಂಧವ್ಯದ ಕಥೆ ಇಲ್ಲಿದೆ.

ಕಾಡಾನೆಗಳು ನಾಡಿಗೆ ಆಹಾರ ಅರಸಿಕೊಂಡು ಲಗ್ಗೆಯಿಟ್ಟರೆ ಎಲ್ಲವನ್ನೂ ಪುಡಿಗೈಯುತ್ತವೆ ಎನ್ನುವುದು ಸಾಮಾನ್ಯ ನಂಬಿಕೆ. ಹೀಗಾಗಿ ಕಾಡಾನೆಗಳ ಸ್ವಭಾವವನ್ನು ಕಣ್ಣಾರೆ ಕಂಡ ಕಾಡಿನಂಚಿನಲ್ಲಿ ಬದುಕುವ ಕುಟುಂಬಗಳು ಸಾಧ್ಯವಾದಷ್ಟೂ ಕಾಡಾನೆಗಳ ಸಹವಾಸದಿಂದ ದೂರವೇ ಉಳಿಯುತ್ತಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದ ಕಾಡಿನಿಂದ ಕೊಡಗಿನ ಭಾಗಮಂಡಲ ಕಾಡಿಗೆ ಪ್ರತೀ ವರ್ಷವೂ ಸವಾರಿ ಹೋಗುವ ಆನೆಯೊಂದು ಇತರ ಕಾಡಾನೆಗಳಿಗಿಂತ ಕೊಂಚ ಭಿನ್ನ. ಪ್ರತಿ ಡಿಸೆಂಬರ್ ಕೊನೆ ವಾರದಲ್ಲಿ ಪಂಜ ಕಾಡಿನಿಂದ ಸವಾರಿ ಹೊರಡುವ ಈ ಕಾಡಾನೆ, ಕಾಡು-ನಾಡು, ನದಿ-ತೊರೆಗಳನ್ನು ದಾಟಿ ಕೊಡಗಿನ ಭಾಗಮಂಡಲ ಅರಣ್ಯವನ್ನು ಸೇರುತ್ತದೆ. ಆದರೆ ಈ ಬಾರಿ ಜನವರಿ ಕೊನೆಯ ವಾರದಲ್ಲಿ ಈ ಆನೆ ತನ್ನ ಸವಾರಿಯನ್ನು ಆರಂಭಿಸಿದ್ದು, ದಾರಿ ಮಧ್ಯೆ ಕೆಲವು ಮನೆಗಳ ಮುಂದೆಯೂ ಈ ಆನೆ ಹಾದು ಹೋಗುತ್ತದೆ.

CNG ELEPHANT

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಪೆರಾಜೆ ನಿವಾಸಿ ಸುಧಾಕರ್ ರೈ ಮನೆಯ ಮುಂದೆ ಕಳೆದ ಹತ್ತು ವರ್ಷಗಳಿಂದ ಈ ಆನೆ ಹಾದು ಹೋಗುತ್ತಿದ್ದು, ಈವರೆಗೂ ಜನರಿಗೆ ಯಾವ ತೊಂದರೆಯನ್ನೂ ಮಾಡಿಲ್ಲ. ಕಾಡಿನ ದಾರಿಯಾಗಿ ಬರುವ ಈ ಆನೆ ಕಾಡಿನ ದಾರಿ ಮುಗಿದಾಗ ನಾಡಿನ ದಾರಿ ಮೂಲಕ ಮತ್ತೊಂದು ಕಾಡು ಸೇರುತ್ತದೆ. ಹೀಗೆ ಸಾಗುವ ಸಂದರ್ಭದಲ್ಲಿ ಹಸಿವಿನ ಅನುಭವವಾದಾಗ ದಾರಿ ಮಧ್ಯೆ ಸಿಗುವ ಬಾಳೆ ಗಿಡ, ಹೂವಿನ ಗಿಡಗಳನ್ನು ತಿಂದು ಸಾಗುವ ಈ ಆನೆ ಇದೀಗ ಈ ಗ್ರಾಮದಾದ್ಯಂತ ಚಿರ ಪರಿಚಿತವಾಗಿದೆ ಎಂದು ಇಲ್ಲಿನ ಸ್ಥಳೀಯರು ಹೇಳುತ್ತಾರೆ.

ಸಾಮಾನ್ಯವಾಗಿ ಅರಣ್ಯ ಇಲಾಖೆಯು ಆನೆಗಳ ಚಲನವಲನಗಳನ್ನು ಗಮನಿಸಬೇಕಾಗಿದ್ದು, ಈ ಆನೆಯ ವಿಚಾರದಲ್ಲಿ ಮಾತ್ರ ಸಂಬಂಧಪಟ್ಟ ಗ್ರಾಮಸ್ಥರೇ ನೋಡಿಕೊಳ್ಳುತ್ತಿದ್ದಾರೆ. ಪಂಜ ಕಾಡಿನಿಂದ ಆನೆ ಸವಾರಿ ಹೊರಟಿದೆ ಎನ್ನುವುದನ್ನು ತಿಳಿದ ತಕ್ಷಣವೇ ಅಲರ್ಟ್ ಆಗುವ ಆ ಗ್ರಾಮದ ಜನ ಆನೆ ಸಾಗುವ ಗ್ರಾಮದ ಜನರಿಗೆ ಆನೆ ಸವಾರಿಯ ಸುದ್ದಿ ತಲುಪಿಸುತ್ತಾರೆ.

elephant web

ಸುಮಾರು 30 ರಿಂದ 35 ವರ್ಷ ಪ್ರಾಯದ ಈ ಆನೆ ಪಂಜ, ಉಬರಡ್ಕ, ದೇರಾಜೆ ಮಾರ್ಗವಾಗಿ ಪೆರಾಜೆ ಮೂಲಕ ಭಾಗಮಂಡಲ ಕಾಡನ್ನು ಸೇರುತ್ತದೆ. ಈ ಮಧ್ಯೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯನ್ನೂ ದಾಟುವ ಈ ಆನೆ ಪಯಸ್ವಿನಿ ನದಿಯನ್ನು ಈಜಾಡಿಯೇ ಭಾಗಮಂಡಲ ಅರಣ್ಯಕ್ಕೆ ಸೇರುತ್ತದೆ. ಹೀಗೆ ಹೊರಟ ಈ ಕಾಡಾನೆ ಫೆಬ್ರವರಿ ಕೊನೆಯ ವಾರಕ್ಕೆ ಮತ್ತೆ ಇದೇ ಮಾರ್ಗವಾಗಿ ಪಂಜ ಅರಣ್ಯವನ್ನು ಸೇರುತ್ತಿದ್ದು, ದಾರಿ ಮಧ್ಯೆ ಕಾಡಾನೆಗೆ ಯಾವುದೇ ರೀತಿಯ ತೊಂದರೆಯಾಗದಂತೆಯೂ ಗ್ರಾಮಸ್ಥರು ನೋಡಿಕೊಂಡಿದ್ದಾರೆ. ಹೀಗೆ ಒಂದು ಅಪರೂಪದ ಬಾಂಧವ್ಯ ಈ ಆನೆ ಮತ್ತು ಗ್ರಾಮಸ್ಥರ ನಡುವೆ ಬೆಳೆದಿದ್ದು ಈ ಬಾಂಧವ್ಯ ಹೀಗೆಯೇ ಉಳಿಯಲಿ ಎನ್ನುವುದು ಹಾರೈಕೆಯಾಗಿದೆ.

TAGGED:elephantforestPublic TVSulyavillagersಆನೆಕಾಡುಗ್ರಾಮಸ್ಥರುಪಬ್ಲಿಕ್ ಟಿವಿ Mangaloreಮಂಗಳೂರುಸುಳ್ಯ
Share This Article
Facebook Whatsapp Whatsapp Telegram

Cinema news

sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories

You Might Also Like

TRAIN 1
Latest

ಡಿ.26 ರಿಂದ ರೈಲು ಪ್ರಯಾಣ ದರ ಏರಿಕೆ; ಎಸಿ – ನಾನ್‌ ಎಸಿಗೆ ಎಷ್ಟು ಏರಿಕೆ?

Public TV
By Public TV
23 minutes ago
Mallikarjun Kharge 1
Districts

ರಾಜ್ಯದಲ್ಲಿ ನಾಯಕತ್ವ ಗೊಂದಲ ಹೈಕಮಾಂಡ್‌ ಸೃಷ್ಟಿಸಿಲ್ಲ, ಅವ್ರೇ ಮಾಡಿಕೊಂಡಿದ್ದಾರೆ: ಖರ್ಗೆ ಗರಂ

Public TV
By Public TV
52 minutes ago
Gruhalakshmi Scheme 1
Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
By Public TV
2 hours ago
RANJAN
Bengaluru City

ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ

Public TV
By Public TV
2 hours ago
South Africa Shooting
Latest

ದಕ್ಷಿಣ ಆಫ್ರಿಕಾದಲ್ಲಿ ಸಾಮೂಹಿಕ ಗುಂಡಿನ ದಾಳಿ – 10 ಮಂದಿ ಬಲಿ

Public TV
By Public TV
2 hours ago
Hebbal
Bengaluru City

ವಾಹನ ಸವಾರರಿಗೆ ಗುಡ್‌ನ್ಯೂಸ್‌ – ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ರ‍್ಯಾಂಪ್‌ ಓಪನ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?