ಚಿಕ್ಕಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಉತ್ಪನ್ನಗಳು ಕೃಷಿ ಉಪಕರಣಗಳು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಸಡ್ಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.
ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೃಷಿ ಉತ್ಪನ್ನಗಳು ಹಾಗೂ ಕೃಷಿ ಉಪಕರಣಗಳು ಬೆಂಕಿಗಾಹುತಿಯಾಗಿದೆ. ಗ್ರಾಮದ ಲಕ್ಷ್ಮಮ್ಮ ಲಕ್ಷ್ಮಣ್ಣರೆಡ್ಡಿ ಎಂಬುರಿಗೆ ಸೇರಿದ ಬಣವೆಗಳಿಗೆ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆಗ ಸಮೀಪದಲ್ಲಿದ್ದ ಹನಿ ನೀರಾವರಿ ಉಪಕರಣಗಳು, ಈರುಳ್ಳಿ ಘಟಕ ಸೇರಿ ಕೃಷಿ ಉಪಕರಣಗಳು ಸುಟ್ಟು ಕರಕಲಾಗಿವೆ.
ಸುಮಾರು 4 ಲಕ್ಷಕ್ಕೂ ಅಧಿಕ ಮೌಲ್ಯದ ಕೃಷಿ ಉತ್ಪನ್ನಗಳು, ಕೃಷಿ ಉಪಕರಣಗಳು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.