ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಅದರಗುಂಚಿ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಸುರೇಶ್ ಗೌಡ ಪಾಟೀಲ್ ತೀವ್ರ ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಸುರೇಶ್ ಗೌಡ ಪಾಟೀಲ್ ಅವರು ಮಹಾರಾಷ್ಟ್ರದ ಪೂನಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಲಕಾರಿಯಾಗದೇ ನಿಧನರಾಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಸುರೇಶ್ ಗೌಡ, ಕ್ರಿಯಾಶೀಲರಾಗಿ ಪಕ್ಷದಲ್ಲಿ ತೊಡಗಿಕೊಂಡಿದ್ದರು.