ಚಿಕ್ಕಬಳ್ಳಾಪುರ: ಬಾಳೆಹಣ್ಣು ಸಾಗಿಸುತ್ತಿದ್ದ ಬೊಲೆರೋ ಗೂಡ್ಸ್ ವಾಹನದ ಟೈರ್ ಪಂಕ್ಚರ್ ಆದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 07 ರ ನಂದಿ ಕ್ರಾಸ್ ಬಳಿ ನಡೆದಿದೆ.
ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಾಳೆಹಣ್ಣು ತುಂಬಿಕೊಂಡು ಸಾಗುತ್ತಿದ್ದ ಬೊಲೆರೋ ವಾಹನ ಚಲಿಸುತ್ತಿದ್ದಾಗಲೇ ಟೈರ್ ಪಂಕ್ಚರ್ ಆಗಿ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೊಲೆರೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.
ನಂದಿಗಿರಿಧಾಮ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಚಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಪೊಲೀಸರು ಪಲ್ಟಿಯಾದ ವಾಹನ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.