Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಲ್ಟಾ ಹೊಡೆದ ಸಿಎಂ – ಪಂಚಮಸಾಲಿ 2ಎ ಮೀಸಲಾತಿ ಸಮಗ್ರ ಅಧ್ಯಯನಕ್ಕೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಲ್ಟಾ ಹೊಡೆದ ಸಿಎಂ – ಪಂಚಮಸಾಲಿ 2ಎ ಮೀಸಲಾತಿ ಸಮಗ್ರ ಅಧ್ಯಯನಕ್ಕೆ ಸೂಚನೆ

Bengaluru City

ಉಲ್ಟಾ ಹೊಡೆದ ಸಿಎಂ – ಪಂಚಮಸಾಲಿ 2ಎ ಮೀಸಲಾತಿ ಸಮಗ್ರ ಅಧ್ಯಯನಕ್ಕೆ ಸೂಚನೆ

Public TV
Last updated: February 5, 2021 10:07 pm
Public TV
Share
2 Min Read
CM BSY 1 1
SHARE

ಬೆಂಗಳೂರು: ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವ ಕುರಿತು ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

panchamasali cm letter 1

ನಮ್ಮದು ರಾಷ್ಟ್ರೀಯ ಪಕ್ಷ, ಕೇಂದ್ರ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬೆಳಗ್ಗೆಯಷ್ಟೇ ಸದನದಲ್ಲಿ ಹೇಳಿದ್ದ ಸಿಎಂ ಇದೀಗ ರಾತ್ರಿ ಆಗುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ. ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದವರು ತಮ್ಮ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿದೆ ಮತ್ತು ಸಮಾಜದ ಕಡುಬಡವರಿಗೆ ತೊಂದರೆಯಾಗುವುದರಿಂದ ಸಮಾಜವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸಬೇಕೆಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನಿಡಿದ್ದಾರೆ.

ಬೆಳಗ್ಗೆಯಷ್ಟೇ ವಿಧಾನಸಭೆಯಲ್ಲಿ ನಮ್ಮದು ರಾಷ್ಟ್ರೀಯ ಪಕ್ಷ ಎಂದು ಕೇಂದ್ರ ನಾಯಕರ ಮೇಲೆ ಬೊಟ್ಟು ಮಾಡಿದ್ದ ಯಡಿಯೂರಪ್ಪ, ಇದೀಗ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ರಾತ್ರಿ ಆದೇಶ ಹೊರಡಿಸಿದ್ದಾರೆ.

1 7

ಈ ಕುರಿತು ಸ್ಪಷ್ಟೀಕರಣ ನೀಡಿರುವ ಸಿಎಂ, ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅಪಾರ್ಥ ಮಾಡಿಕೊಂಡಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ನಾನು ಈಗಾಗಲೇ ಸಮಾಜದ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್ ಮತ್ತು ಶಾಸಕರ ಜೊತೆ ಚರ್ಚಿಸಿದ್ದೇನೆ. ಬಳಿಕ ಸಮಾಜದ ಇಬ್ಬರು ಸ್ವಾಮೀಜಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುವಂತೆ ಫೆ.4ರಂದು ಕಳುಹಿಸಿದ್ದೆ ಎಂದು ತಿಳಿಸಿದ್ದಾರೆ.

panchamasali cm letter 2

ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿಗೆ ಸೇರಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ವಿಷಯ ನೀಡಿ ಅಧ್ಯಯನ ಮಾಡಿ, ವರದಿ ಸಲ್ಲಿಸಲು ಕೋರಲಾಗಿದೆ. ನಾನು ಅಧಿವೇಶನದಲ್ಲಿ ಹೇಳಿದ್ದು, ನಮ್ಮದು ರಾಷ್ಟ್ರೀಯ ಪಕ್ಷ, ಸಂಸತ್ ಸದಸ್ಯರ ಜೊತೆ ಚರ್ಚಿಸಿ, ರಾಷ್ಟ್ರೀಯ ನಾಯಕರೊಂದಿಗೆ ವಿಷಯ ಮನವರಿಕೆ ಮಾಡಿಕೊಡಬೇಕು. ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು 3ಬಿಗೆ ಸೇರಿಸುವುದನ್ನು ನೆನಪಿಸಿಕೊಳ್ಳಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳ ಒಳಿತಿಗೆ ನಾನು ಬದ್ಧನಾಗಿದ್ದೇನೆ. ಇಂತಹ ಗಂಭೀರ ವಿಷಯಗಳ ಬಗ್ಗೆ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳದೆ, ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂದು ವಿವರಿಸಿದ್ದಾರೆ.

TAGGED:2A Reservation2ಎ ಮೀಸಲಾತಿChief Minister BS YediyurappaPanchamasali CommunityPublic TVಪಂಚಮಸಾಲಿ ಸಮುದಾಯಪಬ್ಲಿಕ್ ಟಿವಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

IRGC
Latest

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ

Public TV
By Public TV
16 minutes ago
Chandan Kumar Shootout at Canada Accused
Bengaluru City

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಪ್ರಕರಣ – ಆರೋಪಿ ಭಾವಚಿತ್ರ ಬಿಡುಗಡೆ ಮಾಡಿದ ಟೊರಂಟೊ ಪೊಲೀಸರು

Public TV
By Public TV
54 minutes ago
Team India 1 1
Cricket

ಇಂದಿನಿಂದ T20 ವಿಶ್ವಕಪ್‌ ಸೆಮಿಸ್‌ ಕದನ – ಸತತ 3ನೇ ಬಾರಿ ಭಾರತಕ್ಕೆ ಆಂಗ್ಲರೇ ಎದುರಾಳಿ!

Public TV
By Public TV
1 hour ago
30 Sheep Killed in Fire Accident in Ranebennur Haveri
Crime

ಕುರಿ ಶೆಡ್‌ಗೆ ಆಕಸ್ಮಿಕ ಬೆಂಕಿ – 30 ಕುರಿಗಳು ಸಜೀವ ದಹನ

Public TV
By Public TV
1 hour ago
Iran Israel America War Iran cheap drones High Impact
Latest

ಅಮೆರಿಕದ ದುಬಾರಿ ಶಸ್ತ್ರಾಸ್ತ್ರಗಳಿಗೆ ಇರಾನ್‌ನ ಅಗ್ಗದ ಡ್ರೋನ್‌ಗಳ ಸವಾಲು

Public TV
By Public TV
2 hours ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?