ಅಮ್ಮನ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಜಾಗ್ವಾರ್

Public TV
1 Min Read
anitha kumaraswamy birthday2

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ ಜಾಗ್ವಾರ್ ನಿಖಿಲ್ ಕುಮಾರಸ್ವಾಮಿ ತಮ್ಮ ತಾಯಿ ಹುಟ್ಟು ಹಬ್ಬಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕವಾಗಿ ಶುಭಾಶಯವನ್ನು ಕೋರಿದ್ದಾರೆ.

anitha kumaraswamy birthday

ಗೌಡರ ಕುಟುಂಬದ ಸೊಸೆ ಹಾಗೂ ಕುಮಾರಸ್ವಾಮಿ ಅವರ ಮಡದಿ ಅನಿತಾ ಕುಮಾರಸ್ವಾಮಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿವರ್ಷದಂತೆ ಈ ಸಲವೂ ನಿಖಿಲ್ ಅಮ್ಮನಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಅಮ್ಮನೊಂದಿಗಿರುವ ಫೋಟೋ ಹಂಚಿಕೊಳ್ಳುವ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿರುವ ನಿಖಿಲ್ ಲವ್ ಯೂ ಅಮ್ಮ ಎಂದಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಹಂಚಿಕೊಂಡಿರುವ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನಿತಾ ಕುಮಾರಸ್ವಾಮಿಯವರಿಗೆ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ.

ಹುಟ್ಟು ಹಬ್ಬದ ಶುಭಾಶಯಗಳು ಅಮ್ಮ, love you????

Posted by Nikhil Gowda on Tuesday, 23 February 2021

 

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಿಖಿಲ್ ಕುಮಾರಸ್ವಾಮಿ ಆಗಾಗ ತಮ್ಮ ವೈಯಕ್ತಿಯ ವಿಷಯಗಳು, ತಮ್ಮ ಅಪ್ಪ-ಅಮ್ಮನ ಕುರಿತಾದ ವಿಷಯಗಳ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

 

ನಿಖಿಲ್ ಕುಮಾರಸ್ವಾಮಿ ಪತ್ನಿ ಜೊತೆ ಆರ್ ಎಕ್ಸ್ 100 ಬೈಕ್‍ನಲ್ಲಿ ಜಾಲಿ ರೈಡ್ ಹೋಗಿರುವ ವೀಡಿಯೋವನ್ನು ಹಂಚಿಕೊಂಡಿದ್ದರು. ನಿಖಿಲ್ ಕುಮಾರಸ್ವಾಮಿಯವರು ರಾಮನಗರದ ಬಿಡದಿಯ ಕೇತಿಗಾನ ಹಳ್ಳಿ ಬಳಿ ಇರುವ ತೋಟದ ಮನೆಯಲ್ಲಿ ಪತ್ನಿ ರೇವತಿ ಅವರನ್ನು ಆರ್ ಎಕ್ಸ್ 100 ಬೈಕ್‍ನಲ್ಲಿ ಕೂರಿಸಿಕೊಂಡು ರೌಂಡ್ ಹೊಡೆದಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.

Share This Article
Leave a Comment

Leave a Reply

Your email address will not be published. Required fields are marked *