Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕುಕ್ಕೆಯಲ್ಲಿ ಶಿವರಾತ್ರಿ ಆಚರಣೆ ಚರ್ಚೆ – ನಾಳೆ ಧಾರ್ಮಿಕ ತಜ್ಞರ ಸಭೆ: ಕೋಟ ಶ್ರೀನಿವಾಸ ಪೂಜಾರಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಕ್ಕೆಯಲ್ಲಿ ಶಿವರಾತ್ರಿ ಆಚರಣೆ ಚರ್ಚೆ – ನಾಳೆ ಧಾರ್ಮಿಕ ತಜ್ಞರ ಸಭೆ: ಕೋಟ ಶ್ರೀನಿವಾಸ ಪೂಜಾರಿ

Districts

ಕುಕ್ಕೆಯಲ್ಲಿ ಶಿವರಾತ್ರಿ ಆಚರಣೆ ಚರ್ಚೆ – ನಾಳೆ ಧಾರ್ಮಿಕ ತಜ್ಞರ ಸಭೆ: ಕೋಟ ಶ್ರೀನಿವಾಸ ಪೂಜಾರಿ

Public TV
Last updated: February 28, 2021 7:57 pm
Public TV
Share
2 Min Read
UDP KOTASHIVARAMA POOJARY 2
SHARE

ಉಡುಪಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಶಿವರಾತ್ರಿ ಪೂಜೆ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಪೂಜಾಪದ್ಧತಿಯ ಬಗ್ಗೆ ಮಾಧ್ವ, ಶೈವ ಗುಂಪುಗಳ ನಡುವೆ ಜಿಜ್ಞಾಸೆ ಮೂಡಿದ್ದು, ಎರಡೂ ಗುಂಪಿನವರನ್ನು ಕರೆದು ಮಾತನಾಡುವೆ ಎಂದು ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

KUKKE

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ ಪೂಜಾರಿ ಅವರು, ಸೋಮವಾರ ಈ ಬಗ್ಗೆ ಸಭೆ ನಡೆಸಲಾಗುವುದು. ಶಿವನ ಅಂಶ ಇರುವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆ ಮಾಡಲು ಇಲಾಖೆ ಸೂಚಿಸುತ್ತದೆ. ಕುಕ್ಕೆಯಲ್ಲಿ ಈ ಬಗ್ಗೆ ಚರ್ಚೆ ಇದ್ದರೆ ಆಗಮ ಪಂಡಿತರು ತೀರ್ಮಾನ ಕೈಗೊಳ್ಳುತ್ತಾರೆ. ದೇವಸ್ಥಾನ, ಮುಜರಾಯಿ ಇಲಾಖೆಯ ಆಗಮ ಪಂಡಿತರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

kota srinivas

ಅಷ್ಟಮಂಗಲದ ವಿಚಾರಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಗಮನಿಸುತ್ತದೆ. ಈ ಬಗ್ಗೆ ನಮ್ಮ ಮೇಲೆ, ಇಲಾಖೆ ಮೇಲೆ ಯಾವುದೇ ಒತ್ತಡ ಇಲ್ಲ, ಸೋಮವಾರ ನಡೆಯುವ ಸಭೆಯಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ ತಜ್ಞರು ಆಗಮ ಪಂಡಿತರು ಈ ಬಗ್ಗೆ ಚರ್ಚಿಸಲಿದ್ದಾರೆ ಎಂದರು.

ಪೂಜಾಕ್ರಮ ಬದಲಿಸಬೇಡಿ
ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಮಂಡಿಸಿದ್ದಾರೆ.

UDP SWAMIJI

ಕುಕ್ಕೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದ ಪೂಜಾ ಪದ್ಧತಿ ಯನ್ನು ಮುಂದುವರಿಸಬೇಕು. ಆಚರಣೆಯಲ್ಲಿ ಭಿನ್ನವಾದರೆ ದೇವಸ್ಥಾನ ಅದನ್ನು ಒಪ್ಪಿಕೊಳ್ಳುವುದಿಲ್ಲ. ಪ್ರತಿಷ್ಠಾ ಕಾಲದಲ್ಲಿ ಪೂಜೆ ಯಾವ ರೀತಿ ಆರಂಭವಾಗಿದೆ ಅದು ಹಾಗೆಯೇ ಮುಂದುವರೆಯಬೇಕು. ಯಾವುದೇ ವ್ಯತ್ಯಾಸಗಳು ಆದರೆ ದೋಷ ಬರುತ್ತದೆ. ನನಗೆ ರುದ್ರನ ಮೇಲೆ ದ್ವೇಷ ಇಲ್ಲ. ನಾನು ರುದ್ರ ಪಾರಾಯಣ ಮಾಡುತ್ತೇನೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾನು ರುದ್ರ ಪಾರಾಯಣ ಮಾಡಿಸುತ್ತಿದ್ದೇನೆ. ಯಾವುದೇ ದೇವಸ್ಥಾನದಲ್ಲಿ ಆಗಲಿ ಹಿಂದಿನಿಂದ ಬಂದ ಆಚರಣೆ ಅದು ಹಾಗೆಯೇ ಮುಂದುವರೆಯಬೇಕು. ಮಂತ್ರ ಕ್ರಮ ಎಲ್ಲವೂ ತಂತ್ರದ ರೀತಿಯಲ್ಲಿ ಬಂದರೆ ಚಂದ ಎಂದರು.

ಕುಕ್ಕೆಯಲ್ಲಿ ಸ್ಕಂದನ ದೇವಸ್ಥಾನ ಇರುವುದು. ಸ್ಕಂದನ ಪೂಜೆ ಹೇಗೆ ಆಗಬೇಕೋ ಅದು ಹಾಗೆ ನಡೆದುಕೊಂಡು ಬರುತ್ತಿದೆ. ಸುಬ್ರಮಣ್ಯ ಸ್ಕಂದ ಕೇಂದ್ರಿತವಾದಂತಹ ಕ್ಷೇತ್ರ. ಬದಲಾವಣೆಗಳು ಆಗಬೇಕಾದರೆ ವಿಮರ್ಶೆ ಮಾಡಬೇಕು ಎಂಬುದು ನನ್ನ ಅನಿಸಿಕೆ. ನನ್ನ ಅಭಿಪ್ರಾಯ ಕೇಳಿದರೆ ಯಾವುದೇ ಪೂಜಾ ಬದಲಾವಣೆಗಳು ಬೇಡ. ಆದರೆ ಬದಲಾವಣೆ ಬೇಕು ಅನ್ನುವವರು ವಿಮರ್ಶೆ ಮಾಡಿ ಎಂದು ಪಲಿಮಾರು ಸ್ವಾಮೀಜಿ ಸಲಹೆ ಕೊಟ್ಟಿದ್ದಾರೆ.

TAGGED:kota srinivas poojaryKukke SubramanyaPublic TVshivratriudupiVidyadheesha swamijiಉಡುಪಿಕುಕ್ಕೆ ಸುಬ್ರಹ್ಮಣ್ಯಕೋಟ ಶ್ರೀನಿವಾಸ ಪೂಜಾರಿಪಬ್ಲಿಕ್ ಟಿವಿವಿದ್ಯಾಧೀಶ ಸ್ವಾಮೀಜಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
13 minutes ago
Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
54 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
59 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
60 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
1 hour ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?