ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಜಾಗೀರ ವೆಂಕಟಾಪುರ ಗ್ರಾಮದ ಯುವಕ ಮಲ್ಲಿಕಾರ್ಜುನ (21) ಸಾವನ್ನಪ್ಪಿದ್ದಾನೆ. ಶಾವಂತಗೇರಿ ಗ್ರಾಮದ 16 ವರ್ಷದ ಬಾಲಕಿಯ ಸ್ಥಿತಿ ಗಂಭೀರವಾಗಿದೆ.
ವಿಷ ಸೇವಿಸಿದ ಬಳಿಕ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟರೆ ಬಾಲಕಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ವರಸೆಯಲ್ಲಿ ಇಬ್ಬರು ಅಣ್ಣ-ತಂಗಿಯರಾಗುತ್ತಾರೆ. ಇದೇ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎನ್ನಲಾಗಿದೆ.
ಘಟನೆ ಹಿನ್ನೆಲೆ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.