ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದೊಂದಿಗೆ ಆರಂಭಿಸಲಾಗಿರುವ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಉಚಿತ ಟ್ಯಾಬ್ ವಿತರಿಸಲಾಯಿತು.
ತುಮ್ಮನಹಳ್ಳಿ ಶಾಲೆಯ 36 ವಿದ್ಯಾರ್ಥಿಗಳಿಗೆ 18 ಟ್ಯಾಬ್‍ಗಳನ್ನ ವಿತರಿಸಲಾಯಿತು. ಶಾಲೆಯಲ್ಲಿ ವ್ಯಾಸಂಗ ಮಾಡಿ ಸದ್ಯ ಮಾನ್ಯ ಉಚ್ಚನ್ಯಾಯಾಲಯದಲ್ಲಿ ಸರ್ಕಾರಿ ವಕೀಲರಾದ ವಾಣಿ ಹರೀಶ್ ಗೌಡ ರವರು ಈ ಉಚಿತ ಟ್ಯಾಬ್‍ಗಳನ್ನ ಕೊಡುಗೆ ನೀಡಿದ್ದಾರೆ. ಸ್ವತಃ ಶಾಲೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನ ಸದ್ಭಳಕೆ ಮಾಡಿಕೊಳ್ಳುವಂತೆ ಹೇಳಿದ್ದಾರೆ.
ಪಬ್ಲಿಕ್ ಟಿವಿ ಹಾಗೂ ಟ್ಯಾಬ್ ದೇಣಿಗೆ ನೀಡಿದ ವಾಣಿ ಹರೀಶ್ ಗೌಡರವರಿಗೆ ಗ್ರಾಮಸ್ಥರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.