Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ

Bengaluru City

ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ

Public TV
Last updated: March 7, 2021 12:27 pm
Public TV
Share
2 Min Read
petrol kumaraswamy
SHARE

ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳೇನಾದರೂ ಜಿಎಸ್‌ಟಿಗೆ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌ ತರುವ ಬಗ್ಗೆ ಕುಮಾರಸ್ವಾಮಿ ಸರಣಿ ಟ್ವೀಟ್‌ ಹೊರ ಹಾಕಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ ಜಿಎಸ್‌ಟಿಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ.

Petrol

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು ಜಿಎಸ್‌ಟಿಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ.

ರಾಜ್ಯಗಳು ಜಿಎಸ್‌ಟಿ ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ.

diesel petrol14032020 1c

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದನ್ನೂ ಓದಿ: ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಸರ್ಕಾರಗಳ ನಿಲುವು ಏನು?

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ?

PETROL CUT

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ.

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ.
2/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 7, 2021

TAGGED:dieselgstkannadanewskarnatakaKumaraswamypetrolಕರ್ನಾಟಕಜಿಎಸ್‍ಟಿತೆರಿಗೆತೈಲ ಬೆಲೆಪೆಟ್ರೋಲ್
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

chamarajanagara school children
Chamarajanagar

‘ಪಬ್ಲಿಕ್ ಟಿವಿ’ ಇಂಪ್ಯಾಕ್ಟ್; ನಿತ್ಯ 7 ಕಿಮೀ ನಡೆಯುತ್ತಿದ್ದ ಶಾಲಾ ಮಕ್ಕಳಿಗೆ ಸಿಕ್ತು ಜೀಪ್ ಭಾಗ್ಯ

Public TV
By Public TV
5 minutes ago
Ramalinga Reddy 1
Belgaum

ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದ್ರೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ರಾಮಲಿಂಗಾ ರೆಡ್ಡಿ

Public TV
By Public TV
13 minutes ago
IndiGo Flight
Latest

ಇಂಡಿಗೋ ಸಮಸ್ಯೆ ಇದ್ದಾಗಲೂ ಟಿಕೆಟ್‌ ದರ 39 ಸಾವಿರಕ್ಕೆ ಏರಿದ್ದು ಹೇಗೆ – ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

Public TV
By Public TV
2 hours ago
Goa Nightclub Ajay Gupta
Crime

ಗೋವಾ ನೈಟ್‌ಕ್ಲಬ್‌ ಬೆಂಕಿ ದುರಂತ ಕೇಸ್‌; ಕ್ಲಬ್‌ನ ಸಹ-ಮಾಲೀಕ ಬಂಧನ

Public TV
By Public TV
2 hours ago
Venkatesh Prasad meets CM Siddaramaiah DCM DK Shivakumar
Belgaum

ಕ್ರಿಕೆಟ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಗಲಿದೆ: ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್‌ ಪ್ರಸಾದ್‌

Public TV
By Public TV
2 hours ago
Dharmasthala Case Mahesh Shetty Thimarodi Mattannavar Jayant Vitthala Gowda Jayants role criminal conspiracy
Bengaluru City

ಧರ್ಮಸ್ಥಳ ಕೇಸ್‌- ತಿಮರೋಡಿ, ಮಟ್ಟಣ್ಣನವರ್‌, ಜಯಂತ್‌, ವಿಠಲ ಗೌಡ, ಜಯಂತ್‌ ಪಾತ್ರ ಏನು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?