ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಅನಘಾಗೆ 2 ಚಿನ್ನ 1 ಬೆಳ್ಳಿ ಪದಕ

Public TV
1 Min Read
ANAGHA

– ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

anagha 3

ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ 1 ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಸ್ಕೇಟಿಂಗ್ ಗೋಲ್ಡ್ ಮೆಡಲಿಸ್ಟ್ ಅನಘಾ ಮಂಗ್ಳೂರಿಗೆ- ವಿಮಾನ ನಿಲ್ದಾಣದಲ್ಲಿ ಸ್ವಾಗತ

e74aa813 f284 43cf 9d23 4d857355d5d1

ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್ 1 ರಿಂದ 4 ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ. ಇದನ್ನೂ ಓದಿ: ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ವೀರೇಂದ್ರ ಹೆಗ್ಗಡೆಯವರಿಂದ ಚಿನ್ನದ ಪದಕ

0b8bd8fe a358 4082 9437 85f12c037124 e1615371377551

ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅನಘಾ ಇನ್ನಷ್ಟು ಸಾಧನೆ ಮಾಡಲಿ ಅನ್ನೋದು ನಮ್ಮ ಹಾರೈಕೆ.

Share This Article
Leave a Comment

Leave a Reply

Your email address will not be published. Required fields are marked *