ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿದೆ.
8 ದಿನದ ಹಿಂದೆ ದುಬೈನಿಂದ ಬೆಂಗಳೂರಿಗೆ ಇವರಿಬ್ಬರು ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು.
ಬಳ್ಳಾರಿಗೆ ಬಂದ ಬಳಿಕ ಇವರು ಹೋಂ ಕ್ವಾರಂಟೈನ್‌ನಲ್ಲಿದ್ದರು. ಈ ಅವಧಿಯಲ್ಲಿ ಒಬ್ಬರಿಗೆ ಕೊರೊನಾ ಲಕ್ಷಣಗಳು ಕಾಣಿಸಿದೆ. ಹೀಗಾಗಿ ಇಬ್ಬರ ಗಂಟಲ ದ್ರವವನ್ನು ತೆಗೆದು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಫಲಿತಾಂಶದಲ್ಲಿ ದಕ್ಷಿಣ ಆಫ್ರಿಕಾ ಕೊರೊನಾ ಇರುವುದು ದೃಢಪಟ್ಟಿದೆ.
ಇಬ್ಬರನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ ಅವರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗುತ್ತಿದೆ.
ಈ ಮೊದಲು ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿತ್ತು.