ಚಿಕ್ಕಮಗಳೂರು: ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಹುಟ್ಟುಹಬ್ಬವನ್ನು ಜಿಲ್ಲೆಯಲ್ಲಿ ಸರಳವಾಗಿ ಆಚರಿಸಿಕೊಂಡಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕುಟುಂಬಸ್ಥರೊಂದಿಗೆ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ತಾಲೂಕಿನ ನಿಡುವಾಳೆಗೆ ಬಂದಿದ್ದ ಪುನೀತ್ ಅವರನ್ನು ನೋಡಲು ಅಭಿಮಾನಿಗಳು ಆಗಮಿಸಿದ್ದರು. ತಮ್ಮ ನೆಚ್ಚಿನ ನಟನೊಂದಿಗೆ ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು ಖುಷಿಪಟ್ಟರು. ಬಂದಂತಹ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದ ಸಂಭ್ರಮದ ಕ್ಷಣಗಳನ್ನ ಕಳೆದು ಎಲ್ಲರೊಂದಿಗೂ ಕ್ಯಾಮಾರಕ್ಕೆ ಪೋಸ್ ಕೊಟ್ಟ ಪವರ್ ಸ್ಟಾರ್ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಹಿಂದಿರುಗಿದ್ದಾರೆ.


