ವಿಜಯಪುರ: ಹೈ ವೋಲ್ಟೇಜ್ ವಿದ್ಯುತ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿರುವ ಹೈ ವೋಲ್ಟೇಜ್ ವಿದ್ಯುತ್ ಕಂಬದಲ್ಲಿ ಶವ ಪತ್ತೆಯಾಗಿದೆ. ಮುದ್ದೇಬಿಹಾಳ ತಾಲೂಕು ಹಂಡರಗಲ್ ಗ್ರಾಮದ ರಮೇಶ್ ಸಿದ್ದರಾಮಪ್ಪ ಕಣಕಾಲ(26) ಶವ ಪತ್ತೆಯಾಗಿದ್ದು, ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮೃತ ರಮೇಶ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಮುದ್ದೇಬಿಹಾಳ ಪಟ್ಟಣದಲ್ಲೇ ರೂಮ್ ಮಾಡಿಕೊಂಡು ರಮೇಶ್ ವಾಸವಿದ್ದ. ಕಾಲುವೆಯಲ್ಲಿ ಈಜಲು ಹೋಗುತ್ತೇನೆ ಎಂದು ಹೇಳಿ ಮನೆಯಿಂದ ಹೋಗಿದ್ದನಂತೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.