Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿ ಅವಲೋಕಿಸಿದ ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬೆಂಗಳೂರು ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿ ಅವಲೋಕಿಸಿದ ಡಿಸಿಎಂ

Karnataka

ಬೆಂಗಳೂರು ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿ ಅವಲೋಕಿಸಿದ ಡಿಸಿಎಂ

Public TV
Last updated: April 12, 2021 6:07 pm
Public TV
Share
4 Min Read
ASHWATHNARAYAN 1 1
SHARE

– ದಿನಕ್ಕೆ 10,000 ಜನರಿಗೆ ಪರೀಕ್ಷೆ
– ದಿನದ 24 ಗಂಟೆಯೂ ಕೋವಿಡ್ ಹೆಲ್ಪ್ ಲೈನ್

ಬೆಂಗಳೂರು: ಕೋವಿಡ್ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ದಿನಕ್ಕೆ 10,000 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ASHWATHNARAYAN 4

ಮಲ್ಲೇಶ್ವರದ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಗರದ ಪಶ್ಚಿಮ ವಲಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಿದ ಅಶ್ವತ್ಥನಾರಾಯಣ ಅವರು, ಸದ್ಯಕ್ಕೆ ದಿನಕ್ಕೆ 6,000 ಜನರಿಗೆ ಪರೀಕ್ಷೆ ಮಾಡಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ದಿನಕ್ಕೆ 8,000 ಜನರನ್ನು ತಪಾಸಣೆಗೆ ಒಳಪಡಿಸಲಾಗುವುದು. ಈ ಪ್ರಮಾಣವನ್ನು 10,000ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಏಪ್ರಿಲ್ 1ರಿಂದ 10ನೇ ತಾರೀಖಿನೊಳಗೆ ಇದ್ದಕ್ಕಿದ್ದ ಹಾಗೆ ಪಶ್ಚಿಮ ವಲಯವೂ ಸೇರಿ ಇಡೀ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವೇನು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದಕ್ಕಾಗಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯವಾಗಿ, ಯಾರೇ ಓರ್ವ ಸೋಂಕಿತ ಪತ್ತೆಯಾದ ಮೇಲೆ ಆತನ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ನಲ್ಲಿರುವ ಕನಿಷ್ಠ 20 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ಮಾಹಿತಿ ಹಂಚಿಕೊಂಡರು.

ASHWATH NARAYAN

ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ಅವರು ಆಸ್ಪತ್ರೆ ಅಥವಾ ತಮ್ಮ ಮನೆಯಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯಬಹುದು. ಅವರಿಗೆ ಎಲ್ಲ ರೀತಿಯ ಔಷಧೋಪಚಾರ ಮಾಡಲಾಗುವುದು. ಈಗಾಗಲೇ ಈ ವಲಯದಲ್ಲಿ 4,500ಕ್ಕೂ ಹೆಚ್ಚು ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಕೋವಿಡ್ ಮಾರ್ಗಸೂಚಿಯಂತೆ ಮೆಡಿಕಲ್ ಕಿಟ್ ನೀಡಲಾಗಿದ್ದು ಕಾಲಕಾಲಕ್ಕೆ ಅವರ ಮೇಲೆ ನಿಗಾ ಇರಿಸಲಾಗಿದೆ. ಇನ್ನೂ 700 ಜನ ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಡಿಸಿಎಂ ತಿಳಿಸಿದರು.

ಹೆಲ್ಪ್ ಲೈನ್
ಈ ವಲಯದಲ್ಲಿ ಎಲ್ಲೆಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಪ್ರತಿಯೊಬ್ಬ ವ್ಯಕ್ತಿಗೂ ನೀಡಲಾಗುತ್ತದೆ. ನವ ಮಾಧ್ಯಮಗಳ ಮೂಲಕ, ಮಾಧ್ಯಮಗಳ ಮೂಲಕ ಹಾಗೂ ಕರಪತ್ರಗಳ ಮೂಲಕ ಮಾಹಿತಿ ಕೊಡಲಾಗುತ್ತಿದೆ. ಕೋವಿಡ್ ಹೆಲ್ಪ್‍ಲೈನ್ 080-68248454 ಸಂಖ್ಯೆಗೆ ದಿನದ 24 ಗಂಟೆಯೂ ಕರೆ ಮಾಡಬಹುದು. ಜೊತೆಗೆ, ವಲಯದಲ್ಲಿ 84 ಮೊಬೈಲ್ ತಂಡಗಳಿವೆ. ಕೂಡಲೇ ಈ ತಂಡಗಳ ಸಂಖ್ಯೆಯನ್ನು 100ಕ್ಕೇರಿಸಲಾಗುವುದು. ಇನ್ನು ಸೋಂಕಿತರಿಗೆ ಯಾವ ರೀತಿಯ ಚಿಕಿತ್ಸೆ ನೀಡಬೇಕು ಎಂಬುದನ್ನು ಬಹಳ ವೈಜ್ಞಾನಿಕವಾಗಿ ಲೈನಪ್ ಮಾಡಲಾಗಿದೆ. ಇದರೊಂದಿಗೆ ಜನರಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ 24 ಗಂಟೆಯೊಳಗೇ ರಿಸಲ್ಟ್ ಕೊಡಲಾಗುತ್ತಿದೆ ಎಂದು ಹೇಳಿದರು.

ಹಾಸಿಗೆಗಳ ಕೊರತೆ ಇಲ್ಲ
ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದ್ದರೂ ಪಶ್ಚಿಮ ವಲಯದ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಕೊರತೆ ಇಲ್ಲ. ಹೀಗಾಗಿ ಜನರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ. ಸರ್ಕರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಕೊರತೆ ಇಲ್ಲ. ಎಲ್ಲಡೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ಈ ಸೋಂಕು ಬಂದಾಗ ಇದರ ತೀವ್ರತೆ ಹೆಚ್ಚಾಗಿತ್ತು. ಆದರೆ, ಎರಡನೇ ಅಲೆ ಸಂದರ್ಭದಲ್ಲಿ ಸೋಂಕು ವೇಗವಾಗಿ ಹರಡುತ್ತಿದ್ದರೂ ಆದರ ತೀವ್ರತೆ, ಅಂದರೆ ಜೀವಕ್ಕೆ ಅಪಾಯವಾಗುವ ಪ್ರಮಾಣ ಕಡಿಮೆಯಾಗಿದೆ. ಜೀವಕ್ಕೆ ಅಪಾಯವಿಲ್ಲ. ಹೆದರುವ ಅಗತ್ಯ ಇಲ್ಲ ಎಂದು ತಿಳಿಸಿದರು.

ASHWATHNARAYAN 3

ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಈಗಾಗಲೇ 50 ಐಸಿಯು ಬೆಡ್‍ಗಳಿವೆ. ಇದನ್ನು 100ಕ್ಕೆ ಹೆಚ್ಚಿಸಲಾಗುವುದು. ಈ ಭಾಗದ ಜನರಿಗೆ ಸ್ಥಳೀಯ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಕೋವಿಡ್ ಅಲ್ಲದ ರೋಗಿಗಳಿಗೂ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಇತರ ರೋಗಿಗಳಿಗೆ 350 ಬೆಡ್‍ಗಳನ್ನು ಮೀಸಲಿರಿಸಲಾಗಿದೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ 500 ಬೆಡ್‍ಗಳನ್ನು ಕೋವಿಡ್ ಸೋಂಕಿತರಿಗಾಗಿಯೇ ನೀಡಲು ಸಿದ್ಧರಿದ್ದಾರೆ. ಅಲ್ಲಿ ಸದ್ಯಕ್ಕೆ 300 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 100 ಹಾಸಿಗೆ ಖಾಲಿ ಇದೆ. ಹೆಚ್ಚುವರಿಯಾಗಿ 100 ಹಾಸಿಗೆ ನೀಡಲು ಅವರು ಸಿದ್ಧರಿದ್ದಾರೆ. ಅದೇ ರೀತಿ ಗಾಂಧೀನಗರದ ಆಯುರ್ವೇದ ಆಸ್ಪತ್ರೆ, ಗೋವಿಂದರಾಜ ನಗರದ ಆಸ್ಪತ್ರೆಯಲ್ಲೂ ಕೋವಿಡ್ ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ವ್ಯಾಕ್ಸಿನೇಷನ್‍ಗೆ ಉತ್ತಮ ಪ್ರತಿಕ್ರಿಯೆ
ಪಶ್ಚಿಮ ವಿಭಾಗದಲ್ಲಿ ನಿಗದಿ ಮಾಡಿದಂತೆ ಶೇ.45ರಷ್ಟು ವ್ಯಾಕ್ಸಿನೇಷನ್ ಗುರಿ ತಲುಪಲಾಗಿದೆ. ಲಸಿಕೆ ಲಭ್ಯವಿದ್ದು, 45 ವರ್ಷ ಮೇಲ್ಪಟ್ಟವರಿಗೆ ಎಲ್ಲಡೆ ವ್ಯಾಕ್ಸಿನ್ ಕೊಡಲಾಗುತ್ತಿದೆ. ಪ್ರತಿಯೊಬ್ಬರೂ ತಮಗೆ ಸಮೀಪ ಇರುವ ಲಸಿಕಾ ಕೇಂದ್ರಕ್ಕೆ ಹೋಗಿ ವ್ಯಾಕ್ಸಿನ್ ಪಡೆಯಬೇಕು. ವ್ಯಾಕ್ಸಿನ್ ಪಡೆದರೆ ಸೋಂಕಿನ ಸಂಪರ್ಕ ಕೊಂಡಿಯನ್ನು ತುಂಡರಿಸಬಹುದು. ಹೀಗಾಗಿ ಲಸಿಕೆ ಹಾಕುವುದನ್ನು ಮತ್ತಷ್ಟು ವೇಗಗೊಳಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಮಾಹಿತಿಯನ್ನು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ASHWATHNARAYAN 2 1

ಲಾಕ್‍ಡೌನ್ ಮಾಡುವುದಿಲ್ಲ
ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಾಕ್‍ಡೌನ್ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ. ಜೀವವು ಉಳಿಯಬೇಕು, ಜೀವನವೂ ನಡೆಯಬೇಕು ಎಂಬುದು ಸರಕಾರದ ನಿಲುವು. ಹೀಗಾಗಿ ಕೆಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಜನರು ಸರ್ಕಾರ ಕೈಗೊಳ್ಳುವ ಕ್ರಮಗಳನ್ನು, ಕೊಡುವ ಸೂಚನೆಗಳನ್ನು ಪಾಲಿಸಬೇಕು. ಈಗ ವಿಧಿಸಲಾಗಿರುವ ನೈಟ್ ಕಫ್ರ್ಯೂವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಆರೋಗ್ಯ ಇಲಾಖೆ ಆಯುಕ್ತ ಡಾ.ತ್ರಿಲೋಕಚಂದ್ರ, ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿ ಐಎಎಸ್ ಅಧಿಕಾರಿ ಪ್ರಜ್ವಲ್ ಘೋಷ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

TAGGED:Ashwath NarayanbengaluruCoronaCovid 19Public TVYediyurappaಅಶ್ವತ್ಥನಾರಾಯಣಕೊರೊನಾಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
9 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
21 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
23 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
36 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?