ಬೆಂಗಳೂರು: ಸ್ಯಾಂಡಲ್‍ವುಡ್ ನವರಸನಾಯಕ ಜಗ್ಗೇಶ್ ಅವರ ಸಹೋದರನಿಗೆ ಕೊರೊನಾ ಪಾಸಿಟಿವ್ ಬಂದು ತಾವು ಪಟ್ಟ ಕಷ್ಟವನ್ನು ನಟ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಕೇಡುಬಯಸದೆ ಮೋಸವಂಚನೆ ಅನ್ಯಾಯಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆತಾಯಿಯನ್ನು ನೋಹಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ,
ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕಮಾಡುವ ಎಲ್ಲಾಕ್ಷೇತ್ರದಲ್ಲು ಪ್ರಾಮಾಣಿಕನಾಗಿದ್ದರೆ,ರಾಯರು ನನ್ನಹೃದಯಲ್ಲಿದ್ದರೆ ಸಾವಿನಮನೆ ಕದತಟ್ಟುತ್ತಿರುವ
— ನವರಸನಾಯಕ ಜಗ್ಗೇಶ್ (@Jaggesh2) April 27, 2021
ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಜಗ್ಗೇಶ್, ನಾನು ಇಷ್ಟುದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು. ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ. ಅದು ಒಂದೆ ರಾಯರೆ ನಾನು ಕಾಯವಾಚಮನ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗೂ ಕೇಡು ಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗೂ ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ-ತಾಯಿಯನ್ನು ನೋಹಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಠೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನ ಮನೆ ಕದತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು.
ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು!ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು!komal is safe????ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು
ಸ್ವಂತ ವ್ಯೆವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ!ಆದರೆ ಇತ್ತೀಚೆಗೆ ತನಗೆ ಬರಬೇಕಾದ bill
— ನವರಸನಾಯಕ ಜಗ್ಗೇಶ್ (@Jaggesh2) April 27, 2021
ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದು ಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು. ಕೋಮಲ್ ಈಸ್ ಸೇಫ್. ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ. ಆದರೆ ಇತ್ತೀಚೆಗೆ ತನಗೆ ಬರಬೇಕಾದ ಬಿಲ್‍ಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು. ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬಾ ಸೀರಿಯಸ್ ಆಗಿಬಿಟ್ಟ. ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ. ಅವನಿಗೆ ಸಹಾಯ ಮಾಡಿದ ಡಾ. ಮಧುಮತಿ, ನಾದನಿ ಡಾ ಲಲಿತ ನರ್ಸ್ ಗಳ ಪಾದಕ್ಕೆ ನನ್ನ ನಮನ, ರಾಯರೆ ಎಂದು ಜಗ್ಗೇಶ್ ಸರಣಿ ಟ್ವೀಟ್ ಮಾಡಿದ್ದಾರೆ.
ಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು!ಅದ ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ!ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!ಅವನಿಗೆ ಸಹಾಯಮಾಡಿದ ಡಾ: ಮಧುಮತಿ,ನಾದನಿ ಡಾ ಲಲಿತ
ನರ್ಸಗಳ ಪಾದಕ್ಕೆ ನನ್ನ ನಮನ,
ರಾಯರೆ????????
— ನವರಸನಾಯಕ ಜಗ್ಗೇಶ್ (@Jaggesh2) April 27, 2021