ಚೆನ್ನೈ: ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ ನಾಲಿಗೆಯನ್ನು ಕತ್ತರಿಸಿಕೊಳ್ಳುತ್ತೇನೆ ಎಂದು ಹರಕೆ ಹೊತ್ತಿದ್ದ ಮಹಿಳೆ ಹರಕೆಯನ್ನು ತೀರಿಸಿದ್ದಾರೆ.
32 ವರ್ಷದ ವನಿತಾ ಹರಕೆಯನ್ನು ಹೊತ್ತಿದ್ದರು. 2021ರ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಿದ್ದಿದ್ದು, ಅದರಲ್ಲಿ ಡಿಎಂಕೆಗೆ ಬಹುಮತ ಬಂದಿದೆ. ಹೀಗಾಗಿ ಫಲಿತಾಂಶ ಹೊರಬರುತ್ತಿದ್ದಂತೆ ವನಿತಾ ತಮ್ಮ ಹರಕೆಯನ್ನು ಸಲ್ಲಿಸಿದ್ದಾರೆ.
ಜನಾದೇಶ ಡಿಎಂಕೆ ಪರವಾಗಿ ಹೊರಬೀಳುತ್ತಿದ್ದಂತೆ ವನಿತಾ ಮುಥಾಲಮ್ಮನ ದೇವಾಲಯಕ್ಕೆ ಹೋಗಿ ತಮ್ಮ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಕೋವಿಡ್ 19 ಇರುವ ಕಾರಣಕ್ಕೆ ಅಲ್ಲಿ ಯಾವುದೇ ಪೂಜೆ, ಹರಕೆ ಸಲ್ಲಿಸುವ ಅವಕಾಶ ಇರಲಿಲ್ಲ. ಹಾಗಾಗಿ ನಾಲಿಗೆಯನ್ನು ದೇಗುಲದ ಬಾಗಿಲನಲ್ಲಿರುವ ಗೇಟ್ ಬಳಿ ಇಟ್ಟಿದ್ದರು. ಅಷ್ಟರಲ್ಲಿ ವನಿತಾ ಎಚ್ಚರವಿಲ್ಲದೆ ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೇ ವನಿತಾಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.