Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1912 ಹೆಲ್ಪ್ ಲೈನ್ ಸರಿಯಾಗಲು 2 ದಿನ ಗಡುವು ನೀಡಿದ ಡಿಸಿಎಂ ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1912 ಹೆಲ್ಪ್ ಲೈನ್ ಸರಿಯಾಗಲು 2 ದಿನ ಗಡುವು ನೀಡಿದ ಡಿಸಿಎಂ ಅಶ್ವಥ್ ನಾರಾಯಣ್

Bengaluru City

1912 ಹೆಲ್ಪ್ ಲೈನ್ ಸರಿಯಾಗಲು 2 ದಿನ ಗಡುವು ನೀಡಿದ ಡಿಸಿಎಂ ಅಶ್ವಥ್ ನಾರಾಯಣ್

Public TV
Last updated: May 3, 2021 9:06 pm
Public TV
Share
3 Min Read
ASHWATH 1
SHARE

– ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಸಭೆ
– ಇಡೀ ವ್ಯವಸ್ಥೆ ಪಾರದರ್ಶಕವಾಗಿರಲಿ
– ಹಾಸಿಗೆಗಳ ಮಾಹಿತಿ ಮುಚ್ಚಿಡುವಂತಿಲ್ಲ

ಬೆಂಗಳೂರು: ಎರಡು ದಿನಗಳ ಒಳಗಾಗಿ ಬೆಂಗಳೂರು ಮಹಾನಗರದಲ್ಲಿ ಕೋವಿಡ್‍ಗೆ ಸಂಬಂಧಿತ ಎಲ್ಲ ಸೇವೆಗಳನ್ನು 1912 ಹೆಲ್ಪ್‍ಲೈನ್‍ಗೆ ಜೋಡಿಸಬೇಕು. ಬೆಡ್ ಹಂಚಿಕೆ ಪಾರದರ್ಶಕಗೊಳಿಸಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆಯ ನೂತನ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಅಧಿಕಾರಿಗಳಿಗೆ ಡೆಡ್‍ಲೈನ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಿನವಿಡೀ ಕೋವಿಡ್ ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡ ಅವರು, ಮಾಹಿತಿ ಮತ್ತು ಸೌಲಭ್ಯಗಳ ಕೊಂಡಿಯಾಗಿರುವ ಹೆಲ್ಪ್‍ಲೈನ್ ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶದಿಂದ ಸೋಮವಾರ ಸಂಜೆ ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಬೆಂಗಳೂರು ನಗರದಲ್ಲಿರುವ ಕೋವಿಡ್ ಬೆಡ್‍ಗಳ ಪ್ರಮಾಣ, ಹಂಚಿಕೆ ಹಾಗೂ ಅವುಗಳ ಲೈವ್ ಸ್ಟೇಟಸ್, ಆಕ್ಸಿಜನ್ ಬೆಡ್‍ಗಳ ಮಾಹಿತಿ ಹಾಗೂ ಅವುಗಳ ಲಭ್ಯತೆ, ಆಪ್ತಮಿತ್ರ, ಔಷಧ ವಿತರಣೆ, ಲಸಿಕೆ ಅಭಿಯಾನ, 108, 102 ನಿಯಂತ್ರಣ ಕೊಠಡಿ ಮಾಹಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿ ಎಲ್ಲ ಸರಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸಮಗ್ರ ಸೇವೆಗಳು ಸೇರಿದಂತೆ ಇಂಡೆಕ್ಸ್ ಆಪ್ ಅನ್ನು 1912 ಹೆಲ್ಪ್ ಲೈನ್ ಜತೆಗೇ ಅನುಸಂಧಾನಗೊಳಿಸಬೇಕು. ಇನ್ನು ಮುಂದೆ ಕೋವಿಡ್ ನಿರ್ವಹಣೆ ವ್ಯವಸ್ಥೆಯಲ್ಲಿ ಏನೇ ನಡೆದರೂ ಈ ಹೆಲ್ಪ್ ಲೈನ್ ಮೂಲಕವೇ ಆಗಬೇಕು ಎಂದು ಡಿಸಿಎಂ ತಾಕೀತು ಮಾಡಿದರು.

ASHWATH 2

ಕೋವಿಡ್ ಬಂದು ಇಷ್ಟು ದಿನಗಳಾದರೂ ಹೆಲ್ಪ್ ಲೈನ್ ವ್ಯವಸ್ಥೆಯನ್ನು ಸುಧಾರಿಸುವ ಕೆಲಸವೇ ಆಗಿಲ್ಲವೆಂದರೆ ನನಗೆ ಆಶ್ಚರ್ಯವಾಗುತ್ತಿದೆ. ಇನ್ನು ಉಪೇಕ್ಷೆ ಮಾಡುವುದು ಸರಿಯಲ್ಲ. 48 ಗಂಟೆಗಳ ಒಳಗಾಗಿ ಈ ವ್ಯವಸ್ಥೆ ಸಂಪೂರ್ಣವಾಗಿ ಸರಿ ಹೋಗಬೇಕು. ಇದು ನಿಮ್ಮ ತಕ್ಷಣದ ಹೊಣೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಹಿರಿಯ ಅಧಿಕಾರಿ ತುಷಾರ್ ಗಿರಿನಾಥ್ ಮುಂತಾದ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ಕೊಟ್ಟರು.

ಹೆಲ್ಪ್ ಲೈನ್‍ಗೆ ತಾಂತ್ರಿಕ ಅಗತ್ಯಗಳಿದ್ದರೆ ತತ್‍ಕ್ಷಣವೆ ವ್ಯವಸ್ಥೆ ಮಾಡಿಕೊಳ್ಳಿ. ಯಾವುದಾದರೂ ಸಾಫ್ಟ್ ವೇರ್ ಬೇಕಿದ್ದರೆ ಖರೀದಿಸಿ. ಜನ ಬೇಕಿದ್ದರೆ ತಕ್ಷಣವೇ ನೇಮಕ ಮಾಡಿಕೊಳ್ಳಿ. ಸಮಯ ಬಹಳ ಮುಖ್ಯ, ತಡ ಆಗಲೇಬಾರದು ಎಂದು ಅವರು ಹೇಳಿದರು.

ಎಲ್ಲವೂ ಪಾರದರ್ಶಕವಾಗಿರಬೇಕು: ಕೋವಿಡ್‍ನಂಥ ಸಾಂಕ್ರಾಮಿಕ ಪೀಡೆಯನ್ನು ಹತ್ತಿಕ್ಕಬೇಕಾದರೆ ಪರೀಕ್ಷೆ, ಫಲಿತಾಂಶ ಹಾಗೂ ಚಿಕಿತ್ಸೆ ಬಹಳ ಮುಖ್ಯ. ಈ ಮೂರು ಅಂಶಗಳ ಜತೆಗೆ ಮಾಹಿತಿಯೂ ಹೆಚ್ಚು ಮುಖ್ಯ. ಎಲ್ಲರಿಗೂ ಸರ್ಕಾರದ ಮಟ್ಟದಲ್ಲಿ ಏನೂ ಆಗುತ್ತಿಲ್ಲವೆಂಬ ತಪ್ಪು ಕಲ್ಪನೆ ಇದೆ. ಆದರೆ ಏನೇನು ಪ್ರಯತ್ನಗಳು, ಸುಧಾರಣೆ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಜನರಿಗೆ ತಿಳಿಸಬೇಕು. ಪ್ರತಿಯೊಂದು ಅಂಶವೂ ಪಾರದರ್ಶಕವಾಗಿರಲಿ ಎಂದು ಡಾ.ಅಶ್ವಥ್‍ನಾರಾಯಣ್ ಸೂಚಿಸಿದರು.

ಬೆಡ್‍ಗಳ ಮಾಹಿತಿ ಮಸ್ಟ್: ಸರ್ಕಾರಿ- ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಎಲ್ಲೆಡೆ ಇರುವ ಬೆಡ್‍ಗಳ ಬಗ್ಗೆ ಮಾಹಿತಿ ನಮ್ಮಲ್ಲಿ ಇರಬೇಕು. ಹಾಸಿಗೆಗಳು ಸರ್ಕಾರದ್ದಾಗಿರಲಿ ಅಥವಾ ಖಾಸಗಿಯವರದ್ದಾಗಿರಲಿ ಎಲ್ಲ ಮಾಹಿತಿಯೂ ಹೆಲ್ಪ್ ಲೈನ್ ಮೂಲಕ ನಗರ ಎಲ್ಲ ವಿಭಾಗಗಳ ಕಚೇರಿಗಳಲ್ಲೂ ಕ್ಷಣಕ್ಷಣಕ್ಕೂ ಅಪ್‍ಡೇಟ್ ಆಗಬೇಕು. ಹಾಗೆಯೇ ಸರ್ಕಾರದ ಬೆಡ್‍ಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿರಬೇಕು ಮತ್ತೂ ಅವುಗಳ ದುರುಪಯೋಗ ಆಗದಂತೆ ನೋಡಿಕೊಳ್ಳಬೇಕು. ಯಾರೂ ಬೆಡ್‍ಗಳ ಮಾಹಿತಿ ಮುಚ್ಚಿಡುವಂತಿಲ್ಲ ಎಂದು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ASHWATH

ಚಿಕಿತ್ಸೆ ನಿರಾಕರಿಸುವಂತಿಲ್ಲ: ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆ ಆಗಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ರೋಗಿಯ ಸ್ಥಿತಿ ಗಂಭೀರವಾಗಿದ್ದರೆ ಕೂಡಲೇ ಒಳರೋಗಿಯನ್ನಾಗಿ ದಾಖಲು ಮಾಡಿಕೊಂಡು ಚಿಕಿತ್ಸೆ ಕೊಡಬೇಕು. ಸೌಮ್ಯ ಲಕ್ಷಣಗಳಿದ್ದರೆ ವೈದ್ಯಕೀಯ ಮಾರ್ಗದರ್ಶನ ಕೊಟ್ಟು ಮನೆಯಲ್ಲೇ ಕ್ವಾರಂಟೈನ್ ಅಗಲು ಸಲಹೆ ಕೊಡಬೇಕು. ಅವರಿಗೆ ಮೆಡಿಕಲ್ ಕಿಟ್ ಕೊಡಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ 1912 ಹೆಲ್ಟ್ ಲೈನ್ ವ್ಯವಸ್ಥಾಪಕ ನಿರ್ದೇಶಕ ಗೋಪಾಲ್, ಪಶ್ಚಿಮ ವಿಭಾಗದ ಉಸ್ತುವಾರಿಯಾದ ಉಜ್ವಲ್ ಘೋಷ್, ಕೌಶಲ್ಯಾಭಿವೃದ್ಧಿ ಇಲಾಖೆಯ ಆಯುಕ್ತ ಅಶ್ವಿನ್ ಗೌಡ, ಜಿಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಸೇರಿದಂತೆ ಹಲವಾರು ಅಧಿಕಾರಿಗಳು ಭಾಗಿಯಾಗಿದ್ದರು.

TAGGED:Ashwath NarayanbengaluruCorona VirusCovid 19Public TVಅಶ್ವಥ್ ನಾರಾಯಣ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
28 minutes ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
35 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
44 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
1 hour ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?