Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಸಿಎಂ ನೇತೃತ್ವದಲ್ಲಿ ಕೋವಿಡ್ ಕಾರ್ಯಪಡೆ ಮಹತ್ವದ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಸಿಎಂ ನೇತೃತ್ವದಲ್ಲಿ ಕೋವಿಡ್ ಕಾರ್ಯಪಡೆ ಮಹತ್ವದ ಸಭೆ

Bengaluru City

ಡಿಸಿಎಂ ನೇತೃತ್ವದಲ್ಲಿ ಕೋವಿಡ್ ಕಾರ್ಯಪಡೆ ಮಹತ್ವದ ಸಭೆ

Public TV
Last updated: May 5, 2021 12:00 pm
Public TV
Share
4 Min Read
sabhe2
SHARE

– 5 ಲಕ್ಷ ಡೋಸ್ ರೆಮಿಡಿಸ್ವಿರ್, ರಾಟ್ ಕಿಟ್, ಲಸಿಕೆ ಖರೀದಿಗೆ ನಿರ್ಧಾರ
– ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್ ದರ ಪರಿಷ್ಕರಣೆ / ಹೆಚ್ಚು ಹಣ ವಸೂಲಿ ಮಾಡಿದರೆ ಗೂಂಡಾ ಕಾಯ್ದೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸರಕಾರದ ವಶದಲ್ಲಿರುವ ಬೆಡ್ ದರ ಪರಿಷ್ಕರಣೆ, ಕೂಡಲೇ 5 ಲಕ್ಷ ರೆಮಿಡಿಸ್ವಿರ್ ಡೋಸ್ ಖರೀದಿ ಹಾಗೂ ಅಗತ್ಯವಿದ್ದಷ್ಟು ರಾಟ್ ಕಿಟ್‍ಗಳನ್ನು ತಕ್ಷಣವೇ ಖರೀದಿ ಮಾಡುವ ಮಹತ್ವದ ನಿರ್ಧಾರಗಳನ್ನು ಕೋವಿಡ್ ಕಾರ್ಯಪಡೆಯ ಸಭೆಯಲ್ಲಿ ಕೈಗೊಳ್ಳಲಾಗಿದೆ.

ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮಂಗಳವಾರ ಬೆಂಗಳೂರಿನಲ್ಲಿ ಕಾರ್ಯಪಡೆ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ದೇಶಿಯ ಅಥವಾ ಜಾಗತಿಕವಾಗಿ ಯಾವುದೇ ಕಂಪನಿ ಆಗಿರಲಿ. ಇವತ್ತೇ ರೆಮಿಡಿಸ್ವೀರ್ ಖರೀದಿಗೆ ಜಾಗತಿಕ ಟೆಂಡರ್ ಕರೆಯಿರಿ ಎಂದು ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೆಮಿಡಿಸ್ವೀರ್ ಕೊರತೆ ಆಗಬಾರದು:

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ರೆಮಿಡಿಸ್ವೀರ್ ಕೊರತೆ ಉಂಟಾಗಬಾರದು. ಕೂಡಲೇ 5 ಲಕ್ಷ ಡೋಸ್ ಆಮದು ಮಾಡಲು ಜಾಗತಿಕ ಟೆಂಡರ್ ಕರೆಯಿರಿ. ಯಾವುದೇ ಕಂಪನಿಯಾದರೂ ಪರವಾಗಿಲ್ಲ. ವಿದೇಶದಿಂದ ಆಮದು ಮಾಡಿಕೊಂಡರೂ ಸರಿ. ರೆಮಿಡಿಸ್ವೀರ್ ಕೊರತೆಯಿಂದ ಜೀವ ಹೋಯಿತು ಎನ್ನುವ ಮಾತು ಇನ್ನು ಕೇಳಿಬರಬಾರದು. ಇವತ್ತೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಎಂದು ಡಿಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದರು.

sabhe

ಖಾಸಗಿ ಆಸ್ಪತ್ರೆಗಳ ಸರಕಾರದ ಬೆಡ್ ದರ ಪರಿಷ್ಕರಣೆ

ಇದೇ ಸಭೆಯಲ್ಲಿ ಸರಕಾರ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಹೊಂದಿರುವ ಹಾಸಿಗೆಗಳ ಪ್ರತಿದಿನದ  ದರವನ್ನು ಪರಿಷ್ಕರಣೆ ಮಾಡುವ ನಿರ್ಧಾರವನ್ನೂ ಕೈಗೊಳ್ಳಲಾಯಿತು. ಗಂಭೀರವಲ್ಲದ ಕೋವಿಡ್ ಸೋಂಕಿತರ ಬೆಡ್ ದರ ಪ್ರತಿದಿನಕ್ಕೆ ಈಗ 5,200 ರೂ. ಇದ್ದು, ಇದರಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ.
ಆಕ್ಸಿಜನ್‍ಯುಕ್ತ ಬೆಡ್ ದರವನ್ನು ದಿನಕ್ಕೆ 7,000ದಿಂದ 8,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಐಸಿಯುನಲ್ಲಿ ವೆಂಟಿಲೇಟರ್ ಹೊರತಾದ ಬೆಡ್ ದರವನ್ನು 8,500ರಿಂದ 9,750 ರೂ.ಗಳಿಗೆ ಹಾಗೂ ಐಸಿಯುನಲ್ಲಿ ವೆಂಟಿಲೇಟರ್ ಸಹಿತ ಬೆಡ್ ದರವನ್ನು 10,000ರಿಂದ 11,500 ರೂ.ಗಳಿಗೆ ಏರಿಸಲಾಗಿದೆ. ಹೊಸ ದರಗಳು ಯಾವಾಗಿನಿಂದ ಜಾರಿಗೆ ಬರುತ್ತವೆ ಎಂಬುದಕ್ಕೆ ಸರಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ಡಿಸಿಎಂ ಸಭೆಯಲ್ಲಿ ಪ್ರಕಟಿಸಿದರು.

ಹೆಚ್ಚು ವಸೂಲಿ ಮಾಡಿದರೆ ಗೂಂಡಾ ಕಾಯ್ದೆಯಡಿ ಕ್ರಮ

ಯಾವುದೇ ಖಾಸಗಿ ಆಸ್ಪತ್ರೆ ಬೆಡ್, ಔಷಧಿ, ಆಕ್ಸಿಜನ್, ರೆಮಿಡಿಸ್ವೀರ್ ಸೇರಿದಂತೆ ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಗೂಂಡಾ ಕಾಯ್ದೆ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಪ್ರಕರಣ ದಾಖಲ ಮಾಡಲಾಗುವುದು ಎಂದು ಡಿಸಿಎಂ ಸ್ಪಷ್ಟ ಎಚ್ಚರಿಕೆ ನೀಡಿದರು.

dcm sabhe4

ಯಾರಾದರೂ ಹೆಚ್ಚು ಶುಲ್ಕ ವಸೂಲಿ ಮಾಡಿದರೆ 112 ಹೆಲ್ಪ್‍ಲೈನ್‍ಗೆ ಕರೆ ಮಾಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ತಮ್ಮ ಹಾಗೂ ಸರಕಾರದ ಬೆಡ್‍ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಟ್ರಸ್ಟ್ ಪೋರ್ಟಲ್‍ನಲ್ಲಿ ಅಪ್‍ಡೇಟ್ ಮಾಡಬೇಕು. ಹಾಸಿಗೆಗಳ ಲೈವ್ ಸ್ಟೇಟಸ್ ಇರಬೇಕು. ಅಧಿಕಾರಿಗಳು ಇದರ ಮೇಲೆ ನಿಗಾ ಇಡಬೇಕು ಎಂದು ಡಿಸಿಎಂ ತಾಕೀತು ಮಾಡಿದರು.

ಇದೇ ವೇಳೆ, ಖಾಸಗಿ ಆಸ್ಪತ್ರೆಗಳ ಬಿಲ್ ಬಾಕಿ ಇದ್ದರೆ ತಕ್ಷಣವೇ ಚುಕ್ತಾ ಮಾಡಿ. ಹಾಗೆಯೇ ಕೋವಿಡ್ ಯೋಧರಾಗಿ ಕೆಲಸ ಮಾಡುತ್ತಿರುವ ಯಾರ ವೇತನವೂ ತಡವಾಗಬಾರದು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಡಾ.ಅಶ್ವತ್ಥನಾರಾಯಣ ಸೂಚನೆ ಕೊಟ್ಟರು.

ಲಸಿಕೆ ಖರೀದಿಗೆ ಸೂಚನೆ

18ರಿಂದ 44 ವರ್ಷ ವಯಸ್ಸಿನ ಎಲ್ಲರಿಗೂ ವ್ಯಾಕ್ಸಿನೇಷನ್ ಮಾಡುವ ಕೆಲಸ ಮಂದಗತಿಯಲ್ಲಿ ಸಾಗುತ್ತಿದೆ. ಲಸಿಕೆ ಅಭಾವದಿಂದ ಹೀಗಾಗಿದೆ. ಎಲ್ಲರಿಗೂ ಸರಕಾರವೇ ಲಸಿಕೆ ಕೊಡಬೇಕಾಗಿದೆ. ರಾಜ್ಯದಲ್ಲಿ 3.26 ಕೋಟಿ ಜನರಿಗೆ ಲಸಿಕೆ ನೀಡಬೇಕಾಗಿದ್ದು, ಇವರಿಗೆ ಎರಡು ಡೋಸ್ ನೀಡಲು 6.52 ಕೋಟಿ ರೂ. ಅಗತ್ಯವಿದೆ. ಕೇಂದ್ರ ಸರಕಾರದಿಂದ 3 ಲಕ್ಷ ಡೋಸ್ ಕೋವಿಶೀಲ್ಡ್  ಬಂದಿದ್ದು, ಮೇ ಎರಡನೇ ವಾರಕ್ಕೆ 15 ಲಕ್ಷ ಡೋಸ್ ಬರುತ್ತದೆ ಎಂದು ಸಭೆಗೆ ಡಿಸಿಎಂ ಮಾಹಿತಿ ನೀಡಿದರು.

dcm sabhe3

ತಕ್ಷಣವೇ ಲಸಿಕೆ ಅಭಿಯಾನದ ಕಾರ್ಯತಂತ್ರವನ್ನು ಬದಲಿಸಬೇಕು. ಲಸಿಕೆಯನ್ನು ಯಾರಿಗೆ ನೀಡಬೇಕು ಎಂಬ ಹೊಸ ಮಾರ್ಗಸೂಚಿ ರೂಪಿಸಬೇಕಿದೆ ಎಂದು ಅವರು ಹೇಳಿದರು.

ರಾಟ್ ಕಿಟ್ ಖರೀದಿಸಿ

ವ್ಯಕ್ತಿಯ ಸ್ಯಾಂಪಲ್ ಸ್ವೀಕರಿಸಿದ ಐದು ನಿಮಿಷಗಳಲ್ಲಿ ಫಲಿತಾಂಶ ಕೊಡುವ ರಾಟ್ ಕಿಟ್‍ಗಳನ್ನು ಎಷ್ಟು  ಅಗತ್ಯವೋ ಅಷ್ಟೂ ಖರೀದಿ ಮಾಡಲು ಡಿಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಕಿಟ್‍ಗೆ ಐಸಿಎಂಅರ್ ಕೂಡ ಮಾನ್ಯತೆ ನೀಡಿದ್ದು, ರೋಗ ಲಕ್ಷಣಗಳಿದ್ದರೆ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

ಉಳಿದಂತೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್‍ಗಳು, ವೈದ್ಯರು, ನರ್ಸುಗಳಿಗೆ ಸೋಂಕು ತಗುಲುತ್ತಿದ್ದು, ಆಯಾ ಜಿಲ್ಲೆಗಳ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೋವಿಡ್ ಕರ್ತವ್ಯಕ್ಕೆ ತಕ್ಷಣವೇ ನಿಯೋಜಿಸುವಂತೆ ಉಪ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ಜತೆಗೆ, ವೈದ್ಯಕೀಯ ಸಿಬ್ಬಂದಿ ಬಳಕೆ ಮಾಡುವ ವಸ್ತುಗಳ ಕೊರತೆಯಾಗಬಾರದು. ಮಾಸ್ಕ್, ಪಿಪಿಎ ಕಿಟ್, ಸ್ಯಾನಿಟೈಸರ್ ಇತ್ಯಾದಿಗಳು ಅಗತ್ಯ ಪ್ರಮಾಣದಲ್ಲಿ ಸದಾ ಲಭ್ಯ ಇರಬೇಕು ಎಂದು ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಕಾರ್ಯಪಡೆ ಸದಸ್ಯರೂ ಸಚಿವರೂ ಆದ ಡಾ.ಕೆ.ಸುಧಾಕರ್, ಎಸ್.ಸುರೇಶ್ ಕುಮಾರ್, ಸಿ.ಸಿ.ಪಾಟೀಲ್ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಆಖ್ತರ್  ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

TAGGED:ಕೋವಿಡ್ ಕಾರ್ಯಪಡೆಕೋವಿಶೀಲ್ಡ್‌ಖಾಸಗಿ ಆಸ್ಪತ್ರೆಬೆಂಗಳೂರುಲಸಿಕೆ
Share This Article
Facebook Whatsapp Whatsapp Telegram

Cinema news

Sudeep 1
ಮಗಳ ಬಗ್ಗೆ ಕೆಟ್ಟ ಕಾಮೆಂಟ್ಸ್ – ವೇಸ್ಟ್ ನನ್ಮಕ್ಳ ಬಗ್ಗೆ ಮಾತಾಡಿ ಟೈಮ್‌ ವೇಸ್ಟ್‌ ಮಾಡಲ್ಲ ಎಂದ ಕಿಚ್ಚ ಸುದೀಪ್‌
Cinema Latest Sandalwood Top Stories
bigg boss elimination
Bigg Boss: ಈ ವಾರ ಡಬಲ್‌ ಎಲಿಮಿನೇಷನ್‌ – ಶಾಕ್‌ ಕೊಟ್ಟ ಬಿಗ್‌ ಬಾಸ್‌
Cinema Latest Top Stories TV Shows
Kichcha Sudeep 1
ಕಪಾಳಕ್ಕೆ ಹೊಡಿಸ್ಕೊಳ್ಳುವಷ್ಟು ಒಳ್ಳೆಯವನಲ್ಲ: ಸುದೀಪ್‌ 
Cinema Latest Sandalwood Top Stories
sudeep mark movie
ಮಾರ್ಕ್ ಸಿನಿಮಾಗೆ ಪೈರಸಿ ಕಾಟ; ಎಷ್ಟು ಲಿಂಕ್ ಡಿಲೀಟ್ ಮಾಡಿಸಿದ್ದು..?
Cinema Latest Sandalwood Top Stories

You Might Also Like

Congress Meet
Latest

ನರೇಗಾ ರದ್ದತಿ ವಿರುದ್ಧ ದೇಶದ್ಯಾಂತ ಹೋರಾಟಕ್ಕೆ ಕಾಂಗ್ರೆಸ್‌ ತೀರ್ಮಾನ

Public TV
By Public TV
3 minutes ago
Areca nut plants 1
Crime

ಅಡಿಕೆ ಕೊನೆ ಕೊಯ್ಯುವಾಗ ವಿದ್ಯುತ್ ಸ್ಪರ್ಶ – ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Public TV
By Public TV
20 minutes ago
kalaburagi women death
Kalaburagi

ಕಲಬುರಗಿ| ದೆವ್ವ ಬಿಡಿಸುವ ಹೆಸರಲ್ಲಿ ಹಲ್ಲೆ; ಮಹಿಳೆ ಸಾವು

Public TV
By Public TV
31 minutes ago
England Test 4
Cricket

ಬಾಕ್ಸಿಂಗ್‌ ಡೇ ಟೆಸ್ಟ್‌ – 5,468 ದಿನಗಳ ಬಳಿಕ ಆಸೀಸ್‌ ನೆಲದಲ್ಲಿ ಟೆಸ್ಟ್‌ ಗೆದ್ದ ಇಂಗ್ಲೆಂಡ್‌

Public TV
By Public TV
40 minutes ago
h.d.deve gowda b.y.vijayendra
Bengaluru City

ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನೋದು ಕಾರ್ಯಕರ್ತರ ಅಪೇಕ್ಷೆ: ವಿಜಯೇಂದ್ರ ಸ್ಪಷ್ಟನೆ

Public TV
By Public TV
1 hour ago
forest department staff killed in tiger attack in bandipur
Chamarajanagar

ಬಂಡೀಪುರ | ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?