ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿದೆ. ಬ್ಲಾಕಿಂಗ್ ದಂಧೆಯಲ್ಲಿ ಇಬ್ಬರು ಮಾತ್ರ ಅಲ್ಲ 17 ಜನ ನೇರವಾಗಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾಗಿರುವ ವಿಚಾರ ಸಿಸಿಬಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳಾದ ನೇತ್ರಾವತಿ ಮತ್ತು ರೋಹಿತ್ ಅವರ ಕರೆ ಡಿಟೇಲ್ ಪರಿಶೀಲಿಸಿದಾಗ ಸ್ಫೋಟಕ ವಿಚಾರಗಳು ಸಿಸಿಬಿ ಮೂಲಗಳಿಂದ ಲಭ್ಯವಾಗಿದೆ.
ಕೆಲವು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಯ ಪಿಆರ್‍ಒಗಳು, ಸಣ್ಣ ಸಣ್ಣ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಈ ದಂಧೆಯಲ್ಲಿ ಭಾಗಿಯಾಗಿದ್ದರು. ವಾರ್ ರೂಂನ ಜೊತೆಯಲ್ಲಿ ನೇರವಾಗಿ ಸಂಪರ್ಕ ಹೊಂದಿದ್ದ ಇವರು ಆರೋಪಿಗಳಿಗೆ ನೇರವಾಗಿ ಕರೆ ಮಾಡಿದರ ಬಗ್ಗೆಯೂ ಮಾಹಿತಿಗಳು ಲಭ್ಯವಾಗಿದೆ.
ಕಳೆದ ರಾತ್ರಿ ಜಯನಗರ ಪೊಲೀಸ್ ಠಾಣೆಗೆ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿ ಬೆಡ್ ಬ್ಲಾಕಿಂಗ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಂಜೆಯ ವೇಳೆಗೆ ಮತ್ತಷ್ಟು ಆರೋಪಿಗಳು ಬಂಧನವಾಗುವ ಸಾಧ್ಯತೆಯಿದೆ.