ಲಕ್ನೋ: ಆಕ್ಸಿಜನ್ ರೀಫಿಲ್ಲಿಂಗ್ ಘಟಕದಲ್ಲಿ ಉಂಟಾದ ಸ್ಫೋಟದಿಂದಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ವರದಿಯಾಗಿದೆ.
ಲಕ್ನೋದ ಚಿನ್ಹಾಟ್ ಎಂಬ ಪ್ರದೇಶದಲ್ಲಿ ಆಕ್ಸಿಜನ್ ರೀಫಿಲ್ಲಿಂಗ್ ಘಟಕವಿದ್ದು ಇಂದು ಸಂಜೆ ಹೊತ್ತಿಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ ಪರಿಣಾಮ ಮೂವರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಾಳುಗಳನ್ನು ಈಗಾಗಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಮರಣ ಹೊಂದಿದವರು ಮತ್ತು ಗಾಯಗೊಂಡವರು ಆಕ್ಸಿಜನ್ ಘಟಕದ ಕಾರ್ಮಿಕರಾಗಿದ್ದು, ಘಟನೆ ಕಾರಣ ಏನೆಂದು ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕಳೆದವಾರ ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಕ್ಸಿಜನ್ ರೀಫಿಲ್ಲಿಂಗ್ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒರ್ವ ಕಾರ್ಮಿಕ ಮೃತಪಟ್ಟು ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು.