Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರೀದಿಸಿದ ಮನೆ ಸಾಮಾನುಗಳನ್ನು ತಲೆ ಮೇಲೆ ಹೊತ್ತೊಯ್ಯಬೇಕೆ, ಸಾಮಾನ್ಯ ಜ್ಞಾನ ಬೇಡವೇ- ಸಿದ್ದರಾಮಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖರೀದಿಸಿದ ಮನೆ ಸಾಮಾನುಗಳನ್ನು ತಲೆ ಮೇಲೆ ಹೊತ್ತೊಯ್ಯಬೇಕೆ, ಸಾಮಾನ್ಯ ಜ್ಞಾನ ಬೇಡವೇ- ಸಿದ್ದರಾಮಯ್ಯ ಕಿಡಿ

Bengaluru City

ಖರೀದಿಸಿದ ಮನೆ ಸಾಮಾನುಗಳನ್ನು ತಲೆ ಮೇಲೆ ಹೊತ್ತೊಯ್ಯಬೇಕೆ, ಸಾಮಾನ್ಯ ಜ್ಞಾನ ಬೇಡವೇ- ಸಿದ್ದರಾಮಯ್ಯ ಕಿಡಿ

Public TV
Last updated: May 9, 2021 12:49 pm
Public TV
Share
3 Min Read
SIDDARAMAHIA 2
SHARE

– ಅಂಗಡಿ ತೆರೆದಿರುತ್ತವೆ, ವಾಹನ ಸಂಚಾರ ಮಾತ್ರ ನಿಷೇಧ- ಮುರ್ಖತನದ ನಿರ್ಧಾರ
– ರೋಗಗ್ರಸ್ತ ಸರ್ಕಾರದಿಂದ ಜನತೆ ಬವಣೆ ಪಡುವಂತಾಗಿದೆ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಲಾಕ್‍ಡೌನ್ ಕುರಿತು ಈಗಾಗಲೇ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಬೆಳಗ್ಗೆ ಅಂಗಡಿ, ಮುಂಗಟ್ಟು ತೆರೆಯಲು ಅವಕಾಶ ನೀಡಿ ವಾಹನ ಸಂಚಾರ ನಿಷೇಧಿಸಿದ್ದಾರೆ. ಖರೀದಿಸಿದ ಮನೆ ಸಾಮಾನುಗಳನ್ನು ಹೇಗೆ ಕೊಂಡೊಯ್ಯಬೇಕು? ಹಳ್ಳಿಗಳಲ್ಲಿ ಅಂಗಡಿಗಳು ದೂರ ಇರುತ್ತವೆ ಅವರು ತಲೆ ಮೇಲೆ ಹೊತ್ತೊಯ್ಯಬೇಕೆ ಎಂಬ ಕುರಿತು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಕಟುವಾಗಿ ಟೀಕಿಸಿದ್ದಾರೆ.

ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ @BJP4Karnataka ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ.

ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್‌ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ.@CMofKarnataka#AntiPeopleLockdown
1/6

— Siddaramaiah (@siddaramaiah) May 9, 2021

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್‍ಡೌನ್ ಗೊಂದಲದ ಗೂಡಾಗಿದ್ದು, ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಷ್ಕೃತ ಲಾಕ್‌ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು @BJP4Karnataka ಸರ್ಕಾರದ ಮೂರ್ಖತನದ ನಿರ್ಧಾರ.@CMofKarnataka#AntiPeopleLockdown
2/6

— Siddaramaiah (@siddaramaiah) May 9, 2021

ಪರಿಷ್ಕೃತ ಲಾಕ್‍ಡೌನ್ ಅನ್ವಯ ಬೆಳಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ, ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಸರ್ಕಾರದ ಮೂರ್ಖತನದ ನಿರ್ಧಾರ. ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ?#AntiPeopleLockdown
3/6

— Siddaramaiah (@siddaramaiah) May 9, 2021

ಹೊಸ ಲಾಕ್‍ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕ್, ಎಟಿಎಂ, ಆಸ್ಪತ್ರೆ ತೆರೆದಿರುತ್ತದೆ. ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ. ಹೊಟೇಲ್‍ನಲ್ಲಿ ಪಾರ್ಸಲ್‍ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಹೊಸ‌ ಲಾಕ್‌ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ.
ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ.

ಹೊಟೇಲ್‌ನಲ್ಲಿ ಪಾರ್ಸಲ್‌ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ.

ಇದೆಂತಹ ತುಘಲಕ್ ಸರ್ಕಾರ?#AntiPeopleLockdown
4/6

— Siddaramaiah (@siddaramaiah) May 9, 2021

ಹೊಸ ಲಾಕ್‍ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ, ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ. ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ
ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ
ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ.@CMofKarnataka#AntiPeopleLockdown
5/6

— Siddaramaiah (@siddaramaiah) May 9, 2021

TAGGED:BS YediyurappaCorona VirusLockdownPublic TVsiddaramaiahಕೊರೊನಾ ವೈರಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯುರಪ್ಪಲಾಕ್‍ಡೌನ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
2 minutes ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
4 minutes ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
37 minutes ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
2 hours ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
2 hours ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?